ನೆಲ್ಲಿಕಾಯಿ ಒಂದು ಆಯುರ್ವೇದ ಅಂಶವಾಗಿದ್ದು, ಇದನ್ನು ಪ್ರಾಚೀನ ಕಾಲದಿಂದಲೂ ಆರೋಗ್ಯ ಮತ್ತು ಕೂದಲಿನ ಆರೈಕೆಯಲ್ಲಿ ಬಳಸಲಾಗುತ್ತಿದೆ. ಇನ್ನು ಇದರಲ್ಲಿ ಅನೇಕ ಅಗತ್ಯ ಕೊಬ್ಬಿನಾಮ್ಲಗಳಿದ್ದು, ಕೂದಲ ಕಿರುಚೀಲಗಳನ್ನು ಬಲಪಡಿಸುತ್ತದೆ.
ನೆಲ್ಲಿಕಾಯಿ ಕೂದಲಿಗೆ ಸಾಕಷ್ಟು ಪೋಷಣೆಯನ್ನು ನೀಡುತ್ತದೆ ಮತ್ತು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸರಿಯಾದ ವಿಧಾನದಲ್ಲಿ ಬಳಸಿದರೆ, ಕೂದಲನ್ನು ಉದ್ದ ಮತ್ತು ದಪ್ಪವಾಗಿಸಲು ಇದು ಸಹಾಯ ಮಾಡುತ್ತದೆ.
ನೆಲ್ಲಿಕಾಯಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಇ ಕೂಡ ಇದ್ದು, ಕೂದಲನ್ನು ಮೃದು ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.
ತಾಜಾ ನೆಲ್ಲಿಕಾಯಿಯನ್ನು ತೆಗೆದುಕೊಂಡು ಚೆನ್ನಾಗಿ ಅರೆದು, ಅದರ ರಸ ತೆಗೆಯಿರಿ. ಅದನ್ನು ಕೂದಲಿನ ಬೇರುಗಳಿಂದ ತುದಿಯವರೆಗೆ ಹಚ್ಚಿ. ನಂತರ, ಸುಮಾರು 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಟ್ಟು, ಬಳಿಕ ಸ್ವಚ್ಛಗೊಳಿಸಿ. ವಾರಕ್ಕೊಮ್ಮೆ ಈ ಪರಿಹಾರವನ್ನು ಮಾಡಿದರೆ ಕೂದಲು ಸುಂದರವಾಗಿ ಬೆಳೆಯುತ್ತದೆ.
ಒಂದು ಬಟ್ಟಲಿನಲ್ಲಿ ನೆಲ್ಲಿಕಾಯಿ ಪುಡಿಯನ್ನು ತೆಗೆದುಕೊಂಡು, ಅಗತ್ಯಕ್ಕೆ ಅನುಗುಣವಾಗಿ ಬಿಸಿನೀರನ್ನು ಸೇರಿಸಿ ದಪ್ಪ ಪೇಸ್ಟ್ ಮಾಡಿ. ನಂತರ 2 ಚಮಚ ಮೊಸರು ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಸಿದ್ಧಪಡಿಸಿದ ಹೇರ್ ಮಾಸ್ಕ್ ಅನ್ನು ಕೂದಲಿಗೆ ಹಚ್ಚಿ. ಸುಮಾರು ಅರ್ಧ ಗಂಟೆಯ ನಂತರ ತೊಳೆಯಿರಿ. ಈ ಹೇರ್ ಮಾಸ್ಕ್ ಅನ್ನು ತಿಂಗಳಿಗೆ 2 ರಿಂದ 3 ಬಾರಿ ಬಳಸಬಹುದು.
ಒಂದು ಬಟ್ಟಲಿನಲ್ಲಿ ಅಗತ್ಯವಿರುವಂತೆ 2 ರಿಂದ 3 ಚಮಚ ನೆಲ್ಲಿಕಾಯಿ ಪುಡಿ ಮತ್ತು ತೆಂಗಿನ ಎಣ್ಣೆಯನ್ನು ಸೇರಿಸಿ. ನಂತರ ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್ ಮಾಡಿ. ಕೂದಲಿಗೆ ಸಂಪೂರ್ಣವಾಗಿ ಹಚ್ಚಿ, 1 ಗಂಟೆಯ ನಂತರ ತೊಳೆಯಿರಿ.
ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.