ನೈಸರ್ಗಿಕವಾಗಿ ತಯಾರಿಸಲಾಗುವ ಮಜ್ಜಿಗೆ ಅದ್ಭುತ ಪಾನೀಯ ಎಂದೇ ಹೇಳಬಹುದು. ಇದು ಪ್ರೋಬಯಾಟಿಕ್ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದ್ದು, ಕರುಳಿನ ಆರೋಗ್ಯವನ್ನು ಕಾಪಾಡುತ್ತವೆ.
ಸಾವಿರಾರು ವರ್ಷಗಳಿಂದ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಮಜ್ಜಿಗೆಯನ್ನು ಆಯುರ್ವೇದದಲ್ಲಿ ಬಳಸಲಾಗುತ್ತದೆ.
ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ 12 ಸಮೃದ್ಧವಾಗಿರುವ ಮಜ್ಜಿಗೆ ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತದೆ, ಅಷ್ಟೇ ಅಲ್ಲದೆ, ಆಂಟಿ ಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು, ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮಜ್ಜಿಗೆ ನಮ್ಮ ಜೀರ್ಣಾಂಗ ವ್ಯವಸ್ಥೆಗೆ ವರದಾನವಾಗಿದೆ. ಮಜ್ಜಿಗೆಯಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾ ಮತ್ತು ಲ್ಯಾಕ್ಟಿಕ್ ಆಮ್ಲವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ.
ರೋಗನಿರೋಧಕ ಶಕ್ತಿಗಾಗಿ ಕರುಳು ಆರೋಗ್ಯಕರವಾಗಿರಬೇಕು. ಅಂದರೆ ಏನೇ ತಿಂದರೂ ಸಹ ಸರಿಯಾಗಿ ಜೀರ್ಣವಾಗಬೇಕು. ಮಜ್ಜಿಗೆ ಕುಡಿಯುವುದರಿಂದ ಕರುಳಿನ ಆರೋಗ್ಯ ಚೆನ್ನಾಗಿರುತ್ತದೆ
ಇದು ದೇಹದ ಮೇಲೆ ವಿಶೇಷವಾಗಿ ಜೀರ್ಣಾಂಗ ವ್ಯವಸ್ಥೆಯ ಮೇಲೆ ತಂಪಾಗಿಸುವ ಪರಿಣಾಮವನ್ನು ಹೊಂದಿದೆ. ಆಸಿಡ್ ರಿಫ್ಲಕ್ಸ್’ನಿಂದ ಹೊಟ್ಟೆಯ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ.
ಮಜ್ಜಿಗೆ ಸೇವನೆಯು ಆಮ್ಲೀಯತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಒಣಗಿದ ಶುಂಠಿ ಅಥವಾ ಕರಿಮೆಣಸಿನಂತಹ ಮಸಾಲೆಗಳನ್ನು ಸೇರಿಸುವುದರಿಂದ ಅದರ ಗುಣಗಳನ್ನು ಇನ್ನಷ್ಟು ಹೆಚ್ಚಿಸಬಹುದು,