ಉತ್ತಮ ಆರೋಗ್ಯಕ್ಕಾಗಿ ಕ್ಯಾರೆಟ್ ಸಹಕಾರಿ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕ್ಯಾರೆಟ್ ನಷ್ಟೇ ಅದರ ಸೊಪ್ಪು ಕೂಡಾ ಸಹಕಾರಿ.
ಕ್ಯಾರೆಟ್ ಎಲೆಗಳ ಸೂಪ್ ಕುಡಿಯುವುದು ತುಂಬಾ ಪ್ರಯೋಜನಕಾರಿಯಾಗಿರಲಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಕ್ಯಾರೆಟ್ ಸೊಪ್ಪಿನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಅಡಗಿರುತ್ತದೆ. ಇದು ಎಲ್ಡಿಎಲ್ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕ್ಯಾರೆಟ್ ಸೊಪ್ಪಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲುಟೀನ್, ಲೈಕೋಪೀನ್ ಮತ್ತು ವಿಟಮಿನ್ ಎ ಇರುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಲುಟೀನ್ ಮತ್ತು ಲೈಕೋಪೀನ್ ಎರಡೂ ದೃಷ್ಟಿಯನ್ನು ಹೆಚ್ಚಿಸುತ್ತವೆ.
ಇದರಲ್ಲಿ ಕಂಡುಬರುವ ಕ್ಯಾರೊಟಿನಾಯ್ಡಗಳು ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾರೊಟಿನಾಯ್ದ್ ಗಳು ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
ಕ್ಯಾರೆಟ್ ಸೊಪ್ಪಿನಲ್ಲಿರುವ ಗುಣಲಕ್ಷಣಗಳು ಯಕೃತ್ತಿನಲ್ಲಿ ಕಂಡುಬರುವ ಕೊಬ್ಬು ಮತ್ತು ಪಿತ್ತರಸದ ಪ್ರಮಾಣವನ್ನು ಕಡಿಮೆ ಮಾಡುತ್ತದೆ.ಇದು ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ.
ಇದರಲ್ಲಿ ವಿಟಮಿನ್ ಕೆ 1, ಎ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಅಧಿಕ ಪ್ರಮಾಣದಲ್ಲಿರುತ್ತದೆ.ಈ ಪೋಷಕಾಂಶಗಳು ಮೂಳೆಗಳನ್ನು ಬಲಗೊಳಿಸುತ್ತದೆ.
ಕ್ಯಾರೆಟ್ ಸೊಪ್ಪಿನಲ್ಲಿರುವ ಫೈಬರ್ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕ್ಯಾರೆಟ್‌ನಲ್ಲಿರುವ ಆಲ್ಫಾ ಮತ್ತು ಬೀಟಾ ಕ್ಯಾರೋಟಿನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.