ಪ್ರತೀದಿನ ಒಂದು ತುಂಡು ಶುಂಠಿ ತಿಂದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ?

Bhavishya Shetty
Sep 20,2023

ಸಂಬಾರ ಪದಾರ್ಥ

ಶುಂಠಿಯು ಪ್ರತಿಯೊಬ್ಬರ ಅಡುಗೆ ಮನೆಯಲ್ಲಿರುವ ಸಂಬಾರ ಪದಾರ್ಥ. ಇದು ಕೇವಲ ಅಡುಗೆಗಷ್ಟೇ ಅಲ್ಲದೆ, ಆರೋಗ್ಯ ಕಣಜವೇ ಆಗಿದೆ. ಇದರ ರಸವನ್ನು ಕುಡಿಯುತ್ತಿದ್ದರೆ ಅಥವಾ ಗಿಡಮೂಲಿಕೆ ಚಹಾದೊಂದಿಗೆ ಸೇವಿಸಿದರೆ ಅದು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಪೋಷಕಾಂಶಗಳು

ಶುಂಠಿಯು ವಿಟಮಿನ್ ಬಿ3, ವಿಟಮಿನ್ ಬಿ6, ವಿಟಮಿನ್ ಸಿ, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಫೋಲೇಟ್, ರೈಬೋಫ್ಲಾವಿನ್ ಮತ್ತು ನಿಯಾಸಿನ್ ನಂತಹ ಪೋಷಕಾಂಶಗಳು ಕಂಡುಬರುತ್ತವೆ.

ಜೀರ್ಣಕ್ರಿಯೆ ಸುಧಾರಿಸಲು

ಶುಂಠಿಯಲ್ಲಿರುವ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಿಂದ ನಿಮ್ಮ ಹೊಟ್ಟೆಯು ಸರಿಯಾಗಿ ಕಾರ್ಯನಿರ್ವಹಿಸುತ್ತದೆ.

ರೋಗನಿರೋಧಕ ಶಕ್ತಿ

ಶುಂಠಿಯು ವಿಟಮಿನ್ ಸಿಯ ಉತ್ತಮ ಮೂಲವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಿಸಲು

ಶುಂಠಿಯಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕಗಳು ಮತ್ತು ನೈಸರ್ಗಿಕ ಮೂತ್ರವರ್ಧಕಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಆರೋಗ್ಯಕರ ಚರ್ಮ

ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ .

ತೂಕ ಕಡಿಮೆ ಮಾಡಲು

ಶುಂಠಿಯು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಕಂಡುಬರುವ ಆಂಟಿ ಆಕ್ಸಿಡೆಂಟ್’ಗಳು ಕೊಬ್ಬನ್ನು ಸುಡುತ್ತದೆ.

ಶೀತ ತಡೆಯಲು

ಶುಂಠಿಯು ಶೀತ ಮತ್ತು ಕೆಮ್ಮನ್ನು ತಡೆಯಲು ಸಹಾಯ ಮಾಡುತ್ತದೆ.

ಮಧುಮೇಹ

ಶುಂಠಿ ಸೇವನೆಯು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ಸಂಧಿವಾತ ಉಪಶಮನ

ಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣಗಳು ಸಂಧಿವಾತ ರೋಗಿಗಳಿಗೆ ಉಪಶಮನ ನೀಡುತ್ತದೆ.

ಒತ್ತಡ ಕಡಿಮೆ ಮಾಡಲು

ಶುಂಠಿಯ ಸೇವನೆಯು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆಲ್ಝೈಮರ್ ತಡೆಯಲು ಸಹಾಯ

ಶುಂಠಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಆಲ್ಝೈಮರ್’ನಂತಹ ಮಾನಸಿಕ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಸೂಚನೆ

ಪ್ರಿಯ ಓದುಗರೇ, ಈ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ನಾವು ಇದನ್ನು ಬರೆಯುವಲ್ಲಿ ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನೀವು ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಿ

VIEW ALL

Read Next Story