ನಿತ್ಯ ಸಪೋಟ ಸೇವನೆಯಿಂದ ಆರೋಗ್ಯಕ್ಕಿದೆ ಬಂಪರ್ ಪ್ರಯೋಜನ

Yashaswini V
May 03,2024

ಪೋಷಕಾಂಶಗಳ ಗಣಿ

ಸಪೋಟ ಹಣ್ಣಿನಲ್ಲಿ ಕಾರ್ಬೋಹೈಡ್ರೇಟ್‌ಗಳು, ಕಬ್ಬಿಣ, ಪ್ರೋಟೀನ್, ರಂಜಕ ಮತ್ತು ಕೊಬ್ಬಿನೊಂದಿಗೆ ಉತ್ತಮ ಪ್ರಮಾಣದ ವಿಟಮಿನ್ ಎ ಕಂಡು ಬರುತ್ತದೆ.

ಸಪೋಟ ಪ್ರಯೋಜನ

ಸಪೋಟ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಅದರಲ್ಲೂ ನಿತ್ಯ ಸಪೋಟ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ ಎಂದು ಹೇಳಲಾಗುತ್ತದೆ. ಅವುಗಳೆಂದರೆ...

ಕರುಳಿನ ಆರೋಗ್ಯ

ಸಪೋಟ ಹಣ್ಣನ್ನು ಸೇವಿಸುವುದರಿಂದ ಇದು ಕರುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕರುಳು ಆರೋಗ್ಯವಾಗಿರುವಂತೆ ರಕ್ಷಿಸುತ್ತದೆ.

ಕಬ್ಬಿಣದ ಕೊರತೆ

ಸಪೋಟದಲ್ಲಿ ರಂಜಕ ಮತ್ತು ಕಬ್ಬಿಣದ ಅಂಶ ಹೇರಳವಾಗಿದೆ. ಈ ಹಣ್ಣನ್ನು ಸೇವಿಸುವುದರಿಂದ ಇದು ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸುತ್ತದೆ.

ರೋಗನಿರೋಧಕ ಶಕ್ತಿ

ಸಪೋಟ ಹಣ್ಣಿನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತದೆ.

ಮಲಬದ್ದತೆ

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯ ಸಪೋಟ ತಿನ್ನುವುದರಿಂದ ಪ್ರಯೋಜನ ಪಡೆಯುತ್ತಾರೆ.

ತೂಕ ಇಳಿಕೆ

ಪ್ರತಿದಿನ ಸೀಮಿತ ಪ್ರಮಾಣದಲ್ಲಿ ಸಪೋಟ ಹಣ್ಣನ್ನು ತಿನ್ನುವುದರಿಂದ ಆರೋಗ್ಯಕರವಾಗಿ ತೂಕ ಇಳಿಸಬಹುದು.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story