ಮೊಸರಿನಲ್ಲಿ ಉರಿಯೂತದ ಜೀರ್ಣಾಂಗ ವ್ಯವಸ್ಥೆಯನ್ನು ಶಮನಗೊಳಿಸಲು ಸಹಕಾರಿಯಾದ ಅಂಶಗಳು ಕಂಡು ಬರುತ್ತದೆ.
ಮೊಸರನ್ನು ತಿನ್ನುವುದರಿಂದ, ಇದನ್ನು ಮುಖಕ್ಕೆ ಲೇಪಿಸುವುದರಿಂದ ಚರ್ಮದ ಆರೋಗ್ಯ ಸುಧಾರಿಸುತ್ತದೆ.
ನಿತ್ಯ ಮೊಸರು ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ನಿತ್ಯ ಮೊಸರು ತಿನ್ನುವುದರಿಂದ ಯೋನಿ ಪಿಎಚ್ ಅನ್ನು ಸಮತೋಲನಗೊಳಿಸಲು, ಯೋನಿ ಸೋಂಕಿನಿಂದ ರಕ್ಷಿಸಲು ಸಹಕಾರಿ ಆಗಿದೆ.
ನಿಯಮಿತವಾಗಿ ಮೊಸರು ತಿನ್ನುವುದರಿಂದ ಇದು ಮೂಳೆಗಳನ್ನು ಬಲಿಷ್ಠಗೊಳಿಸುತ್ತದೆ.
ಮೊಸರು ದೇಹದಲ್ಲಿ ಕಾರ್ಟಿಸೋಲ್ ಹಾರ್ಮೋನ್ ಅನ್ನು ಸಮತೋಲನದಲ್ಲಿಟ್ಟು ತೂಕ ನಿಯಂತ್ರಣವನ್ನು ಪ್ರಚೋದಿಸುತ್ತದೆ.
ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿರುವ ಮೊಸರು ತಿನ್ನುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ.
ಮೊಸರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.