ಮೂಸಂಬಿ ಹಣ್ಣಿನ ಜ್ಯೂಸ್ ಆರೋಗ್ಯ ಪ್ರಯೋಜನ
ವಿಟಮಿನ್-ಎ, ವಿಟಮಿನ್-ಸಿ, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಫೋಲೇಟ್ ಮೊದಲಾದ ಹಲವು ಪೋಷಕಾಂಶಗಳು ಮೂಸಂಬಿಯಲ್ಲಿವೆ.
ಮೂಸಂಬಿಯಲ್ಲಿ ಕಡಿಮೆ ಕ್ಯಾಲೋರಿ ಮತ್ತು ಕಡಿಮೆ ಕೊಬ್ಬಿನಂಶವಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳೂ ಇವೆ.
ತೂಕ ಇಳಿಸಿಕೊಳ್ಳಲು ಬಯಸಿದರೆ ಮೂಸಂಬಿ ರಸವನ್ನುಕುಡಿಯಬಹುದು, ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೂಸಂಬಿಯನ್ನು ಸೇವಿಸುವುದರಿಂದ ಮಲಬದ್ಧತೆಯಿಂದಲೂ ಪರಿಹಾರ ದೊರೆಯುತ್ತದೆ.
ಮೂಸಂಬಿ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕುತ್ತದೆ. ಇದರಲ್ಲಿರುವ ನಾರಿನಂಶವು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮೂಸಂಬಿ ರಸವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿಯಾಗಿದೆ.
ಮೂಸಂಬಿ ರಸವು ಮೂಳೆಗಳ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಕ್ಯಾಲ್ಸಿಯಂ ಇದ್ದು, ಮೂಳೆಗಳನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ.
ಕೀಲು ನೋವಿನಿಂದ ತೊಂದರೆಗೀಡಾಗಿದ್ದರೆ, ಮೂಸಂಬಿ ಜ್ಯೂಸ್ ಕುಡಿಯುವುದು ನಿಮಗೆ ಪರಿಹಾರವನ್ನು ನೀಡುತ್ತದೆ.
ಮೂಸಂಬಿ ಜ್ಯೂಸ್ ಕುಡಿಯುವುದರಿಂದ ತ್ವಚೆಯೂ ಆರೋಗ್ಯಕರವಾಗಿರುತ್ತದೆ. ಇದರಲ್ಲಿರುವ ವಿಟಮಿನ್ ಸಿ ಚರ್ಮದ ಬಣ್ಣವನ್ನು ಸುಧಾರಿಸುತ್ತದೆ.