ವಾರಕ್ಕೊಂದು ದಾಳಿಂಬೆ ತಿನ್ನಿ: ಈ ಕಾಯಿಲೆಗಳಿಗೆ ಬೈ ಬೈ ಅನ್ನಿ

Bhavishya Shetty
Dec 20,2023

ರಕ್ತಹೀನತೆ

ದಾಳಿಂಬೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತಿನ್ನುವುದರಿಂದ ರಕ್ತಹೀನತೆ ಮತ್ತು ಇತರ ಅನೇಕ ರೋಗಗಳನ್ನು ದೂರವಿಡುತ್ತದೆ.

ತೂಕ ಇಳಿಕೆ

ಕೆಂಪು ರಸಭರಿತವಾದ ಬೀಜಗಳನ್ನು ಹೊಂದಿರುವ ದಾಳಿಂಬೆ ಹೃದಯಕ್ಕೆ ಒಳ್ಳೆಯದು. ಮಾತ್ರವಲ್ಲದೆ ತೂಕ ಇಳಿಸುವಲ್ಲಿ ತುಂಬಾ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

ಹೃದಯಕ್ಕೆ ಒಳ್ಳೆಯದು

ದಾಳಿಂಬೆಯು ಪೊಟ್ಯಾಶಿಯಂನಲ್ಲಿ ಸಮೃದ್ಧವಾಗಿರುವ ಕಾರಣ ಹೃದಯಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಅಥವಾ ಕೊಲೆಸ್ಟ್ರಾಲ್ ಸಂಗ್ರಹವಾಗುವುದಿಲ್ಲ. ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ.

ರೋಗನಿರೋಧಕ ಶಕ್ತಿ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ದಾಳಿಂಬೆ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್’ಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಜೀರ್ಣಕ್ರಿಯೆ

ದಾಳಿಂಬೆಯಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ಇದರಿಂದಾಗಿ ಆಹಾರವು ಸರಿಯಾಗಿ ಜೀರ್ಣವಾಗುತ್ತದೆ.

ತ್ವಚೆಯ ಆರೋಗ್ಯ

ದಾಳಿಂಬೆ ಚರ್ಮ ಮತ್ತು ಹಲ್ಲುಗಳ ಆರೋಗ್ಯಕ್ಕೆ ತುಂಬಾ ಪರಿಣಾಮಕಾರಿ ಎಂದು ಹೇಳಲಾಗಿದೆ. ಇದರಲ್ಲಿರುವ ವಿಟಮಿನ್ ಸಿ ತ್ವಚೆಯನ್ನು ಆರೋಗ್ಯಕರವಾಗಿಸುವುದಲ್ಲದೆ ಹೊಳಪನ್ನು ನೀಡುತ್ತದೆ.

ಸೂಚನೆ:

ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ

VIEW ALL

Read Next Story