ಕಿತ್ತಳೆ ಹಣ್ಣಿನಲ್ಲಿ ಜೀವಸತ್ವಗಳು, ಖನಿಜಗಳು, ಬೀಟಾ-ಕ್ಯಾರೋಟಿನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಇರುತ್ತದೆ.
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುವುದರ ಜತೆಗೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಪ್ರತಿದಿನವೂ ಕಿತ್ತಳೆ ಹಣ್ಣು ಅಥವಾ ಇದರ ಹಣ್ಣಿನ ಜ್ಯೂಸ್ ಸೇವಿಸುವುದನ್ನು ರೂಢಿಸಿಕೊಂಡರೆ ನಿಮಗೆ ಹೃದಯ ಸಂಬಂಧಿತ ಕಾಯಿಲೆಗಳು ಬರುವುದಿಲ್ಲ.
ದಿನಕ್ಕೊಂದು ಕಿತ್ತಳೆ ಹಣ್ಣು ತಿಂದ್ರೆ ಸಾಕು ಹಲವಾರು ಆರೋಗ್ಯಕ್ಕೆ ಸಂಬಂಧಿತ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಸ್ವಲ್ಪ ಹುಳಿ ಎನಿಸಿದರೂ ತಿನ್ನಲು ಸಿಹಿಯಾದ ಕಿತ್ತಳೆ ಹಣ್ಣು ದೀರ್ಘಕಾಲದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಹಕಾರಿ.
ಕಿತ್ತಳೆ ಹಣ್ಣು ತಿನ್ನುವುದರಿಂದ ಗ್ಯಾಸ್, ಮಲಬದ್ಧತೆ, ಉಬ್ಬುವುದು & ಹೊಟ್ಟೆಯಲ್ಲಿನ ಸೋಂಕಿನಂತಹ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕಿತ್ತಳೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಸುಧಾರಿಸಬಹುದು.