ಏಲಕ್ಕಿಗೆ ಆಯುರ್ವೇದಲ್ಲಿ ವಿಶೇಷ ಸ್ಥಾನಮಾನವಿದೆ. ಏಲಕ್ಕಿ ಸೇವನೆಯಿಂದ ಹಲವಾರು ಕಾಯಿಲೆಗಳು ಮತ್ತು ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ.
ಏಲಕ್ಕಿ ಬಾಯಿಯ ದುರ್ವಾಸನೆ ದೂರ ಮಾಡುವುದರ ಜೊತೆಗೆ ಜೀರ್ಣಾಂಗಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಗೆ ಸಹಕಾರಿ.
ಏಲಕ್ಕಿಯಲ್ಲಿ ಮೆಟಬಾಲಿಕ್ ಸಿಂಡ್ರೋಮ್ ವಿರುದ್ಧ ಹೋರಾಡುವ ಗುಣ ಲಕ್ಷಣಗಳಿವೆ.
ಏಲಕ್ಕಿಯಲ್ಲಿನ ಆಂಟಿ - ಆಕ್ಸಿಡೆಂಟ್ ಅಂಶಗಳು ಹೃದಯದ ಕಾರ್ಯಕ್ಷಮತೆ ಹೆಚ್ಚಿಸಿ, ದೇಹದ ರಕ್ತದ ಒತ್ತಡ ನಿಯಂತ್ರಣ ಮಾಡುತ್ತವೆ.
ಪ್ರತಿದಿನವೂ ನಿಯಮಿತವಾಗಿ ಏಲಕ್ಕಿಯ ಸೇವನೆಯಿಂದ ಹೃದಯದ ಆರೋಗ್ಯ ಉತ್ತಮಗೊಳ್ಳುತ್ತದೆ.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವ ಶಕ್ತಿಯನ್ನು ಏಲಕ್ಕಿ ಹೊಂದಿದೆ.
ಏಲಕ್ಕಿಯಲ್ಲಿ ದೇಹದ ಯಕೃತ್ ಭಾಗದ ವಿಷಕಾರಿ ತ್ಯಾಜ್ಯಗಳನ್ನು ಹೊರ ಹಾಕುವ ಶಕ್ತಿ ಇದೆ.
ವಿಪರೀತ ಕೊಬ್ಬು ಅಥವಾ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಏಲಕ್ಕಿ ಸೇವಿಸುವ ಅಭ್ಯಾಸ ರೂಢಿಸಿಕೊಂಡರೆ ಪರಿಹಾರ ದೊರೆಯುತ್ತದೆ.