ಸ್ವಲ್ಪ ಕೊತ್ತಂಬರಿ ಬೀಜ, ಜೀರಿಗೆ, ಶುಂಠಿ ಪುಡಿ ಮಾಡಿ ಹಾಲಿನಲ್ಲಿ ಬೆರೆಸಿ ಬಿಸಿ ಮಾಡಿ ಸೇವಿಸಿದರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
ಕೊತ್ತಂಬರಿ ಬೀಜದ ಪುಡಿಯನ್ನು ಕಷಾಯ ಮಾಡಿ ಹಾಲು, ಸಕ್ಕರೆ ಬೆರೆಸಿ ಸೇವಿಸಿದ್ರೆ ವಾಂತಿ ನಿಲ್ಲುತ್ತದೆ.
ಕೊತ್ತಂಬರಿ ಬೀಜದ ಕಷಾಯಕ್ಕೆ ಸಕ್ಕರೆ ಬೆರೆಸಿ ಸೇವಿಸಿದ್ರೆ ತಲೆಸುತ್ತು ಕಡಿಮೆಯಾಗುತ್ತದೆ ಮತ್ತು ಅಜೀರ್ಣವು ನಿವಾರಣೆಯಾಗುತ್ತದೆ.
ಕೊತ್ತಂಬರಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು ಕಲ್ಲುಸಕ್ಕರೆ ಬೆರೆಸಿ ಸೇವಿಸಿದರೆ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
1 ಲೋಟ ಎಳನೀರಿಗೆ ಅರ್ಧ ಚಮಚ ಕೊತ್ತಂಬರಿ ಬೀಜದ ಪುಡಿ, ಸ್ವಲ್ಪ ಬೆಲ್ಲ ಸೇರಿಸಿ ಪ್ರತಿದಿನ ಸೇವಿಸಿದರೆ ಉರಿಮೂತ್ರ ರೋಗ ನಿವಾರಣೆಯಾಗುತ್ತದೆ.
ಕೊತ್ತಂಬರಿ ಬೀಜ ಹಾಗೂ ಒಣ ಶುಂಠಿ ಜಜ್ಜಿ ತಯಾರಿಸಿದ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಸೇವಿಸಿದ್ರೆ ಹೊಟ್ಟೆನೋವು ಕಡಿಮೆಯಾಗುತ್ತದೆ.
ಕೊತ್ತಂಬರಿ ಬೀಜದ ಪುಡಿಗೆ ಜೇನುತುಪ್ಪ ಬೆರೆಸಿ ಸೇವಿಸಿದ್ರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.