ಡ್ರೈಫ್ರೂಟ್ಗಳಲ್ಲಿ ಮೊದಲ ಸ್ಥಾನ ಹೊಂದಿರುವ ಖರ್ಜೂರ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ.
ಚಳಿಗಾಲದಲ್ಲಿ ಖರ್ಜೂರವನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳು ಸಿಗುತ್ತವೆ.
ಖರ್ಜೂರವು ಅನೇಕ ರೋಗಗಳನ್ನು ನಿಯಂತ್ರಿಸಬಲ್ಲ ಶಕ್ತಿಯನ್ನು ಹೊಂದಿದೆ.
ಚಳಿಗಾಲದಲ್ಲಿ ಅಧಿಕ ಬಿಪಿ ನಿಯಂತ್ರಿಸಲು ಪೊಟ್ಯಾಸಿಯಂ ಸಮೃದ್ಧವಾಗಿರುವ ಖರ್ಜೂರವನ್ನು ಪ್ರತಿದಿನ ಸೇವಿಸಬೇಕು.
ನಿಯಮಿತವಾಗಿ ಖರ್ಜೂರವನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಚಳಿಗಾಲದಲ್ಲಿ ಪ್ರತಿನಿತ್ಯ ಖರ್ಜೂರವನ್ನು ಹಾಲಿನೊಂದಿಗೆ ಸೇವಿಸಿದರೆ ಶೀತ ಮತ್ತು ಕೆಮ್ಮು ಕಡಿಮೆಯಾಗುತ್ತದೆ.
ಖರ್ಜೂರದಲ್ಲಿರುವ ಪೋಷಕಾಂಶಗಳು ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.
ನಿಯಮಿತವಾಗಿ ಖರ್ಜೂರವನ್ನು ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ.