ದೊಡ್ಡಪತ್ರೆ ಎಲೆ ಸೇವಿಸುವುದರಿಂದ ನಾವು ಹಲವಾರು ರೋಗಗಳಿಂದ ಮುಕ್ತಿ ಹೊಂದಬಹುದು.
ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ.
ಪದೇಪದೆ ಮಕ್ಕಳಲ್ಲಿ ಕಾಡುವ ಕಫ-ಕೆಮ್ಮು ಮತ್ತು ಶೀತಕ್ಕೆ ನಾಲ್ಕೈದು ದೊಡ್ಡಪತ್ರೆ ಎಲೆಗಳನ್ನು ಕೆಂಡದಲ್ಲಿ ಹಾಕಿ, ಅದರ ರಸ ಹಿಂಡಿ ಜೇನು ಬೆರೆಸಿ ಕುಡಿಸಬೇಕು.
ಶೀತದಿಂದ ಮಕ್ಕಳಿಗೆ ಮಲಬದ್ಧತೆಯಾದರೆ ದೊಡ್ಡಪತ್ರೆ ಎಲೆಗಳ ರಸದಲ್ಲಿ ಜೇನುತುಪ್ಪ ಬೆರೆಸಿ ಕುಡಿಸಬೇಕು.
1 ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ.
ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.
ದೊಡ್ಡಪತ್ರೆಯ ಎಲೆಯ ಜೊತೆಗೆ ಉಪ್ಪು ಸೇರಿಸಿ ತಿನ್ನುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
ದೊಡ್ಡಪತ್ರೆಯ ಎಲೆಗಳಿಂದ ಕಷಾಯ ಮಾಡಿ ಕುಡಿದರೆ ಕೆಮ್ಮು, ಉಬ್ಬಸ ಕಡಿಮೆಯಾಗುತ್ತದೆ.