ಮೊಟ್ಟೆಯಲ್ಲಿ ಪ್ರೋಟೀನ್ ಸೇರಿದಂತೆ ಹಲವಾರು ಪೋಷಕಾಂಶಗಳಿವೆ.
ಮೊಟ್ಟೆಗಳನ್ನು ಸೇವಿಸುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ.
ಮೊಟ್ಟೆ ಸೇವನೆಯು ಹಸಿವನ್ನು ಕಡಿಮೆ ಮಾಡುವುದರಿಂದ ತೂಕ ನಷ್ಟ ಮಾಡಿಕೊಳ್ಳಬಹುದು.
ಆರೋಗ್ಯವಂತ ವ್ಯಕ್ತಿ ದಿನಕ್ಕೆ ಎರಡರಿಂದ ಮೂರು ಮೊಟ್ಟೆಗಳನ್ನು ಸೇವಿಸಬೇಕು.
ತಜ್ಞರ ಪ್ರಕಾರ ಒಂದು ಮೊಟ್ಟೆಯಲ್ಲಿ ಸುಮಾರು 7 ಗ್ರಾಂ ಪ್ರೋಟೀನ್ ಇರುತ್ತದೆ.
ಮೊಟ್ಟೆಯಲ್ಲಿರುವ ಪ್ರೋಟೀನ್ ಸ್ನಾಯುಗಳ ಶಕ್ತಿ ವೃದ್ಧಿಗೆ ಮತ್ತು ಬೆಳವಣಿಗೆಗೆ ಸಹಕಾರಿ.
ಬೆಳಗಿನ ಉಪಾಹಾರದಲ್ಲಿ ಮೊಟ್ಟೆಗಳನ್ನು ತಿಂದರೆ ದಿನವಿಡೀ ಶಕ್ತಿಯುತವಾಗಿರಬಹುದು
ವ್ಯಾಯಾಮದ ನಂತರ ಮೊಟ್ಟೆಗಳನ್ನು ತಿನ್ನುವುದರಿಂದ ದೇಹಕ್ಕೆ ಪೋಷಣೆ ಸಿಗುತ್ತದೆ.