ಖಾರವಾದ ಹಸಿ ಮೆಣಸಿನಕಾಯಿ ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನ ಪಡೆಯಬಹುದು.
ಹಸಿ ಮೆಣಸಿನಕಾಯಿ ಸೇವನೆಯಿಂದ ನಮ್ಮ ದೇಹಕ್ಕೆ ಬೇಕಾದ ಅಗತ್ಯ ಜೀವಸತ್ವಗಳು ಮತ್ತು ಪೋಷಕಾಂಶಗಳು ಸಿಗುತ್ತವೆ.
ಹಸಿ ಮೆಣಸಿನಕಾಯಿಯಲ್ಲಿ ವಿಟಮಿನ್ ‘ಸಿ’ ಹೇರಳವಾದ್ದು, ಇದರ ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
ಹಸಿ ಮೆಣಸಿನಕಾಯಿಯಲ್ಲಿ ಕಿತ್ತಳೆ ಹಣ್ಣಿಗಿಂತ 3 ಪಟ್ಟು ಹೆಚ್ಚಿನ ಪ್ರಮಾಣದ ವಿಟಮಿನ್ ‘ಸಿ’ ಇರುತ್ತದೆ.
ಹಸಿ ಮೆಣಸಿನಕಾಯಿಯಲ್ಲಿರುವ ವಿಟಮಿನ್ ಗುಣ ಮೈಗ್ರೇನ್, ಶೀತ ಸಮಸ್ಯೆ ದೂರವಿಡುತ್ತದೆ ಎಂದು ಹೇಳಲಾಗಿದೆ.
ಹಸಿ ಮೆಣಸಿಕಾಯಿ ಅನಗತ್ಯ ಕೊಬ್ಬನ್ನು ಕರಗಿಸಿ ದೇಹದ ತೂಕ ಇಳಿಸಲು ನೆರವಾಗುತ್ತದೆ.
ಹಸಿ ಮೆಣಸಿನಕಾಯಿ ಸೇವನೆಯು ಹೃದಯದ ಆರೋಗ್ಯಕ್ಕೆ ಉತ್ತಮವೆಂದು ಹೇಳಲಾಗಿದೆ.