ನಿಯಮಿತವಾಗಿ ಕೀವಿಹಣ್ಣು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ಕೀವಿಹಣ್ಣು ಆರೋಗ್ಯಕರ ರಕ್ತದೊತ್ತಡ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಕಿವಿ ಹಣ್ಣು ಸಾಕಷ್ಟು ಪ್ರಮಾಣದ ವಿಟಮಿನ್ ‘C’ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ.
ಕೀವಿಹಣ್ಣು ಪಾರ್ಶ್ವವಾಯು ಮತ್ತು ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ.
ಕಿವಿಹಣ್ಣು ಹೆಚ್ಚಿನ ಮಟ್ಟದ ಆಹಾರದ ಫೈಬರ್ ಅನ್ನು ಸಹ ಒಳಗೊಂಡಿದ್ದು, ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಫೈಬರ್ LDL ಅಥವಾ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಮೂಲಕ ಹೃದ್ರೋಗದ ಅಪಾಯವನ್ನು ತಗ್ಗಿಸುತ್ತದೆ.
ಕಿವಿಹಣ್ಣು ಮಲಬದ್ಧತೆಯನ್ನು ಹೋಗಲಾಡಿಸಲು ತುಂಬಾ ಸಹಕಾರಿಯಾಗಿದೆ.
ಕಿವಿಹಣ್ಣು ಸೇವನೆಯು ನಿಮ್ಮ ಚರ್ಮವನ್ನು ಆರೋಗ್ಯಕರ ಮತ್ತು ಯೌವನದಿಂದ ಇಡುತ್ತದೆ.