ಸ್ಟ್ರಾಬೆರಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
ಸ್ಟ್ರಾಬೆರಿಯಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅನೇಕ ಪೋಷಕಾಂಶಗಳು ಕಂಡುಬರುತ್ತವೆ.
ಸ್ಟ್ರಾಬೆರಿ ಫೈಬರ್ ಜೊತೆಗೆ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು, ತೂಕ ನಷ್ಟಕ್ಕೂ ಸಹಕಾರಿಯಾಗಿದೆ.
ಸ್ಟ್ರಾಬೆರಿಯಲ್ಲಿ ವಿಟಮಿನ್ C, ಆಂಟಿಆಕ್ಸಿಡೆಂಟ್ ಗಳು, ಉರಿಯೂತ ನಿವಾರಕ ಅಂಶ, ಫೋಲೇಟ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳು ಸಮೃದ್ಧವಾಗಿವೆ.
ಸ್ಟ್ರಾಬೆರಿ ಹಣ್ಣು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸಬಲ್ಲದು. ಹೃದಯದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಕ್ಯಾನ್ಸರ್ ಚಿಕಿತ್ಸಕ ಮತ್ತು ಕ್ಯಾನ್ಸರ್ ತಡೆಗಟ್ಟುವ ಗುಣಲಕ್ಷಣಗಳು ಸ್ಟ್ರಾಬೆರಿಗಳಲ್ಲಿ ಕಂಡುಬರುತ್ತವೆ.
ಸ್ಟ್ರಾಬೆರಿಯಲ್ಲಿರುವ ವಿಟಮಿನ್ C ಹಲ್ಲುಗಳ ಹಳದಿ ಬಣ್ಣವನ್ನು ತೆಗೆದುಹಾಕುತ್ತದೆ ಮತ್ತು ಅದರಲ್ಲಿ ಕಿಣ್ವಗಳ ರಚನೆಯನ್ನು ತಡೆಯುತ್ತದೆ.
ಸ್ಟ್ರಾಬೆರಿ ಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ.