ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಸೇವಿಸಿದರೆ ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ನೆಲ್ಲಿಕಾಯಿಯಲ್ಲಿರುವ ವಿಟಮಿನ್ ‘ಸಿ’ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಸಹಕಾರಿ.
ನೆಲ್ಲಿಕಾಯಿ ಜ್ಯೂಸ್ ಕುಡಿದರೆ ಉರಿಯೂತದ ಲಕ್ಷಣಗಳು ಕಡಿಮೆಯಾಗುತ್ತದೆ.
ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ತುಂಬಾ ಚೆನ್ನಾಗಿ ನಡೆಯುತ್ತದೆ.
ನೆಲ್ಲಿಕಾಯಿ ಜ್ಯೂಸ್ ಸೇವನೆಯಿಂದ ಚಯಾಪಚಯ ಕ್ರಿಯೆ ಉತ್ತಮವಾಗಿಸಿ ತೂಕ ನಿಯಂತ್ರಿಸುತ್ತದೆ.
ನೆಲ್ಲಿಕಾಯಿ ಜ್ಯೂಸ್ ಕುಡಿದರೆ ರಕ್ತದಲ್ಲಿ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ, ಇದರಿಂದ ಮಧುಮೇಹ ನಿಯಂತ್ರಿಸಬಹುದು.
ಕೊಲೆಸ್ಟ್ರಾಲ್ ನಿಯಂತ್ರಿಸುವ ನೆಲ್ಲಿಕಾಯಿ ಜ್ಯೂಸ್ ಹೃದಯದ ಆರೋಗ್ಯಕ್ಕೆ ತುಂಬಾನೇ ಉತ್ತಮ.
ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.