ಕಲ್ಲಂಗಡಿ ಹಣ್ಣಿನಲ್ಲಿ ಶೇ.90ರಷ್ಟು ನೀರಿನಂಶವಿದ್ದು, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಕಲ್ಲಂಗಡಿ ಫೈಬರ್ ಹೊಂದಿದ್ದು, ಜೀರ್ಣಕ್ರಿಯೆಯ ಜೊತೆಗೆ ಮಲಬದ್ಧತೆಯನ್ನು ತಡೆಯುತ್ತದೆ.
ಪೊಟ್ಯಾಸಿಯಂನಲ್ಲಿ ಸಮೃದ್ಧವಾಗಿರುವ ಕಲ್ಲಂಗಡಿ ದೇಹದ ದ್ರವ ಸಮತೋಲನಕ್ಕೆ ಸಹಕಾರಿ.
ನಿಯಮಿತವಾಗಿ ಕಲ್ಲಂಗಡಿ ಹಣ್ಣು ಸೇವನೆಯಿಂದ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ.
ಕಲ್ಲಂಗಡಿಯು ದೇಹದ ಉಷ್ಣತೆ ನಿಯಂತ್ರಿಸುವುದರ ಜೊತೆಗೆ ನಿಮ್ಮ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.
ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಕಲ್ಲಂಗಡಿಯು ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.
ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇದ್ದು, ಇದು ಸುಲಭವಾಗಿ ತೂಕ ನಷ್ಟಕ್ಕೆ ಸಹಕಾರಿಯಾಗಿದೆ.
ಕಲ್ಲಂಗಡಿಯಲ್ಲಿ ವಿಟಮಿನ್ C ಮತ್ತು A ಅಂಶವಿದ್ದು, ನಮ್ಮ ಸಮಗ್ರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.