ನೆಲ್ಲಿಕಾಯಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ.
ನೆಲ್ಲಿಕಾಯಿಯಲ್ಲಿ ವಿಟಮಿನ್ C ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ C ಅಂಶ ಇದರಲ್ಲಿದೆ.
ಹಲವಾರು ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ನೆಲ್ಲಿಕಾಯಿಯಲ್ಲಿ ಇದೆ.
ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿರುವ ನೆಲ್ಲಿಕಾಯಿ ರಕ್ತವನ್ನು ಶುದ್ಧಗೊಳಿಸಲು ಸಹಕಾರಿ.
ದಿನನಿತ್ಯ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.
ನೆಲ್ಲಿಕಾಯಿ ಜ್ಯೂಸ್ ಗೆ ಜೇನು ತುಪ್ಪ ಸೇರಿಸಿಕೊಂಡು ಕುಡಿಯುವುದರಿಂದ ಅಸ್ತಮಾ ಕಾಯಿಲೆ ದೂರವಾಗುತ್ತದೆ.
ನೆಲ್ಲಿಕಾಯಿ ಜ್ಯೂಸ್ ನಮ್ಮ ಹೃದಯ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ & ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ.
ಚಯಾಪಚಯಕ್ಕೆ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು ಮತ್ತು ತೂಕ ಕಡಿಮೆ ಮಾಡಲು ಸಹ ಇದು ನೆರವಾಗುತ್ತದೆ.