ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಅನೇಕರು ಮಲಬದ್ಧತೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಆಹಾರ ಪದ್ಧತಿಯಲ್ಲಿ ಬದಲಾವಣೆ ತಂದುಕೊಂಡರೆ ದೀರ್ಘಕಾಲದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ರಾತ್ರಿ ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಸೇವಿಸುವುದು ಮಲಬದ್ಧತೆಗೆ ಪ್ರಯೋಜನಕಾರಿ.
ರಾತ್ರಿ 6-7 ಒಣದ್ರಾಕ್ಷಿಗಳನ್ನು ನೆನೆಸಿ ಮತ್ತು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಲಬದ್ಧತೆ ಗುಣವಾಗುತ್ತದೆ.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
ನೀವು ಸೇವಿಸುವ ಆಹಾರದಲ್ಲಿ ಕೊಬ್ಬರಿ ಎಣ್ಣೆಯನ್ನು ಬಳಸಿದರೆ ಮಲಬದ್ಧತೆ ಸಮಸ್ಯೆ ಬಗೆಹರಿಯುತ್ತದೆ.
ಮನೆಯಲ್ಲಿ ತಯಾರಿಸುವ ಆಹಾರದಲ್ಲಿ ಶುಂಠಿಯನ್ನು ಬಳಸುವುದರಿಂದಲೂ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
ಪ್ರತಿ ದಿನವೂ ಸ್ಟ್ರಾಂಗ್ ಕಾಫಿ ಕುಡಿಯುವುದರಿಂದ ಮಲ ವಿಸರ್ಜನೆ ಸರಾಗವಾಗಿ ನಡೆದು ಮಲಬದ್ಧತೆ ಸಮಸ್ಯೆ ಬರುವುದಿಲ್ಲ.