ಎಳನೀರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು.
ಸುಕ್ಕುಗಟ್ಟಿದ ಚರ್ಮವನ್ನು ಎಳನೀರಿನಿಂದ ತೊಳೆದರೆ ಚರ್ಮದ ಸುಕ್ಕು ನಿವಾರಣೆಯಾಗುತ್ತದೆ.
ಎಳನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮತ್ತು ಮಧುಮೇಹ ರೋಗಲಕ್ಷಣ ಸುಧಾರಿಸಲು ಸಹಕಾರಿ.
ಎಳನೀರು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.
ಎಳನೀರಿನಲ್ಲಿರುವ ವಿಟಮಿನ್ ಕೆ ಮತ್ತು ಕಬ್ಬಿಣದ ಅಂಶ ಕೂದಲಿಗೆ ಸಹಕಾರಿಯಾಗಿದೆ.
ಕೂದಲನ್ನು ಕೊಂಚ ಎಳನೀರಿನಿಂದ ಮಸಾಜ್ ಮಾಡುವುದರಿಂದ ತಲೆಯ ಚರ್ಮದಲ್ಲಿ ರಕ್ತಸಂಚಾರ ಹೆಚ್ಚುತ್ತದೆ.
ಎಳನೀರು ಸೇವನೆಯಿಂದ ಕೂದಲು ಉದುರುವುದು ಕಡಿಮೆಯಾಗಿ ಕೂದಲ ಹೊಳಪು ಹೆಚ್ಚುತ್ತದೆ.
ಎಳನೀರು ಅಧಿಕ ರಕ್ತದೊತ್ತಡ ಕಡಿಮೆ ಮಾಡಲು & ಮೂತ್ರನಾಳದ ಸೋಂಕಿನಿಂದ ನಿಮಗೆ ರಕ್ಷಣೆಯನ್ನು ನೀಡುತ್ತದೆ.