ಇತ್ತೀಚೆಗೆ ಎಲ್ಲಾ ವಯಸ್ಸಿನವರಲ್ಲಿಯೂ ಕಿಡ್ನಿ ಸ್ಟೋನ್ ಸಮಸ್ಯೆ ಕಾಮನ್ ಆಗಿಬಿಟ್ಟಿದೆ.
ದೇಹದಲ್ಲಿ ಸೋಡಿಯಂ ಅಂಶ ಹೆಚ್ಚಾದಾಗ ಅದು ಮೂತ್ರದಲ್ಲಿ ಕ್ಯಾಲ್ಸಿಯಂ ಹೆಚ್ಚಿಸುತ್ತದೆ & ಇದರಿಂದ ಕಿಡ್ನಿ ಸ್ಟೋನ್ ಆಗುತ್ತದೆ.
ಪದೇ ಪದೇ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಏನು ತಿನ್ನಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ದಿನಕ್ಕೆ ಕನಿಷ್ಠ 12 ಗ್ಲಾಸ್ ನೀರು ಕುಡಿಯಿರಿ.
ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ದ್ರಾಕ್ಷಿ ಹಣ್ಣುಗಳನ್ನು ಸೇವಿಸಿರಿ.
ಪ್ರತಿ ಊಟದೊಂದಿಗೆ ದಿನಕ್ಕೆ ಕನಿಷ್ಠ ಮೂರು ಬಾರಿ ಕ್ಯಾಲ್ಸಿಯಂ ಭರಿತ ಆಹಾರವನ್ನು ಸೇವಿಸಬೇಕು.
ಪ್ರಾಣಿ ಪ್ರೋಟೀನ್ ಸೇವನೆಯನ್ನು ಮಿತಿಗೊಳಿಸಬೇಕು.
ಆಕ್ಸಲೇಟ್ ಮತ್ತು ಫಾಸ್ಫೇಟ್ ಅಧಿಕವಾಗಿರುವ ಆಹಾರ ಮತ್ತು ಪಾನೀಯಗಳನ್ನು ತಪ್ಪಿಸಿರಿ.