ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಜನರು ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
ದೇಶದಾದ್ಯಂತ ಅನಾರೋಗ್ಯದಿಂದ ಸಾವನ್ನಪ್ಪುವವರ ಪೈಕಿ ಕ್ಯಾನ್ಸರ್ ರೋಗಿಗಳ ಸಂಖ್ಯೆಯೇ ಹೆಚ್ಚಾಗಿದೆ.
ಶ್ವಾಸಕೋಶದ ಕ್ಯಾನ್ಸರ್ ಮಹಾಮಾರಿಯು ಸಾವಿರಾರು ಜನರ ಜೀವ ಮತ್ತು ಜೀವನವನ್ನೇ ಕಸಿದುಕೊಳ್ಳುತ್ತಿದೆ.
ಪ್ರತಿ ವರ್ಷ ಸುಮಾರು 10 ಮಿಲಿಯನ್‌ಗೂ ಹೆಚ್ಚು ಜನರು ವಿವಿಧ ರೀತಿಯ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ಈ ರೋಗ ಲಕ್ಷಣ ಕಾಣಿಸಿಕೊಂಡ ಪ್ರಾರಂಭದಲ್ಲೇ ಸರಿಯಾದ ಚಿಕಿತ್ಸೆ ನೀಡಿದ್ರೆ ಅಪಾಯದಿಂದ ಪಾರಾಗಬಹುದು.
ವ್ಯಕ್ತಿಯ ರೋಗ ಲಕ್ಷಣಗಳು ಹಾಗೂ ಕ್ಯಾನ್ಸರ್‌ನ ಹಂತಗಳ ಮೇಲೆ ಆಧಾರದ ಮೇಲೆ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಈ ರೋಗಕ್ಕೆ ಶಸ್ತ್ರಚಿಕಿತ್ಸೆ, ಕೀಮೋಥೆರಡಿ, ರೇಡಿಯೊಥೆರಪಿ ಹಾಗೂ ಇಮ್ಯುನೊಥೆರಪಿಗಳಂತಹ ಚಿಕಿತ್ಸೆಗಳಿವೆ.