ರಕ್ತದಲ್ಲಿ ಸಕ್ಕರೆ ಮಟ್ಟವು ಹೆಚ್ಚಾದಾಗ ಅನಾರೋಗ್ಯಕ್ಕೆ ಕಾರಣವಾಗಬಲ್ಲದು.
ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೀವು ಆಹಾರ ಪಥ್ಯ ಮಾಡಬೇಕು.
ನಿಯಮಿತವಾಗಿ ಹಾಗಲಕಾಯಿ ಸೇವನೆಯಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ.
ನಿಯಮಿತವಾಗಿ ಮೆಂತ್ಯ ಬೀಜಗಳ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ದಾಲ್ಚಿನ್ನಿ ಸೇವನೆಯು ಮಧುಮೇಹದ ವಿರುದ್ಧ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿದೆ.
ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದಲೂ ಸುಲಭವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಪ್ರತಿದಿನವೂ ಅರಿಶಿನ ಸೇವನೆಯಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಆಗಾಗ ಬೇವಿನ ಎಲೆ ಸೇವನೆಯಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.