ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
ನಿಯಮಿತವಾಗಿ ಹೃದಯ ತಪಾಸಣೆ ಮಾಡಿಸಬೇಕು.
ಕೌಟುಂಬಿಕವಾಗಿ ಹೃದಯ ಸಂಬಂಧಿತ ಕಾಯಿಲೆಗಳನ್ನು ಹೊಂದಿದ್ದರೆ ಹೃದ್ರೋಗ ಶಾಸ್ತ್ರಜ್ಞರನ್ನು ಭೇಟಿ ಮಾಡಬೇಕು.
ಜಡವಾದ ಜೀವನಶೈಲಿಯನ್ನು ಬದಲಾಯಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು.
ಹೆಚ್ಚುವರಿ ಸಕ್ಕರೆ ಸೇವನೆಯನ್ನು ಬಿಡಿ, ಲಿಪಿಡ್ಗಳನ್ನು ಪರೀಕ್ಷಿಸಿಕೊಳ್ಳಿ ಹಾಗೂ ಕೊಬ್ಬಿನಾಂಶ ಹೆಚ್ಚಿಸುವ ಆಹಾರ ಸೇವನೆಯನ್ನು ನಿಯಂತ್ರಣದಲ್ಲಿರಿಸಿ.
ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸಬೇಕು.
ಐಸೊಮೆಟ್ರಿಕ್ ವ್ಯಾಯಾಮ ತಪ್ಪಿಸಿ, ಹೆಚ್ಚು ಐಸೊಟೋನಿಕ್ ವ್ಯಾಯಾಮಗಳನ್ನು ಮಾಡಿ.
ಅನಗತ್ಯವಾಗಿ ಪೂರಕ ಅಂಶಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳಬೇಡಿ.