ಪ್ರತಿದಿನ ರಾತ್ರಿ ಮಲಗುವ ಮುನ್ನ ಹಾಲಿಗೆ ಬೆಲ್ಲ ಬೆರಸಿ ಸೇವಿಸುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜಗಳು ಲಭ್ಯವಾಗಲಿವೆ.
ಹಾಲಿನಲ್ಲಿರುವ ಕ್ಯಾಲ್ಸಿಯಂ ಸ್ನಾಯು ಸೆಳೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬೆಲ್ಲದಲ್ಲಿರುವ ಕಬ್ಬಿಣವು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬೆಲ್ಲದ ಜೊತೆಗೆ ಬೆಚ್ಚಗಿನ ಹಾಲನ್ನು ಕುಡಿಯುವುದರಿಂದ ಪಿರಿಯಡ್ಸ್ ನೋವಿನಿಂದ ಪರಿಹಾರ ದೊರೆಯುತ್ತದೆ.
ಪ್ರತಿದಿನ ಹಾಲಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಪ್ರತಿದಿನ ಮಲಗುವ ಮೊದಲು ಹಾಲಿಗೆ ಬೆಲ್ಲ ಸೇರಿಸಿ ಕುಡಿಯುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದರಿಂದ ನಿದ್ರಾಹೀನತೆ ಸಮಸ್ಯೆಯೂ ದೂರವಾಗುತ್ತದೆ.
ಮಹಿಳೆಯರ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗೂ ಸಹ ಹಾಲು-ಬೆಲ್ಲ ಒಳ್ಳೆಯ ಮನೆಮದ್ದಾಗಿದೆ.
ಮಂಡಿ ಮತ್ತು ಕೀಲುಗಳಲ್ಲಿ ನೋವು ಹೊಂದಿರುವವರು ಪ್ರತಿದಿನವೂ ಬೆಲ್ಲ ಬೆರೆಸಿದ ಹಾಲು ಕುಡಿಯುವುದರಿಂದ ಶೀಘ್ರವೇ ಪರಿಹಾರ ಪಡೆಯಬಹುದು.