ಭಾರತೀಯ ಸಂಸ್ಕೃತಿಯಲ್ಲಿ ತುಳಿಸಿಯನ್ನು ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ.
ಆಯುರ್ವೇದಿಕ್ ಗುಣ ಹೊಂದಿರುವ ತುಳಸಿ ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿದರೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರಿನ್ನು ಕುಡಿಯುವದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಶೀತ, ಕೆಮ್ಮು ಮತ್ತು ಜ್ವರದಿಂದ ಮುಕ್ತಿ ಹೊಂದಲು ನೀವು ಪ್ರತಿದಿನ ತುಳಸಿ ನೀರನ್ನು ಕುಡಿಯಬೇಕು.
ತುಳಸಿ ನೀರು ದೇಹದಲ್ಲಿರುವ ಕೊಳೆ ತೆಗೆಯಲು ಸಹಕಾರಿಯಾಗಿದೆ.
ತುಳಸಿ ನೀರನ್ನು ಕುಡಿಯುವುದರಿಂದ ನಿಮ್ಮ ದೇಹವು ಒಳಗಿನಿಂದ ಶುದ್ಧ ಮತ್ತು ಆರೋಗ್ಯಕರವಾಗಿರುತ್ತದೆ.
ತುಳಸಿ ನೀರು ಹೊಟ್ಟೆಯ ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ.