ಇತ್ತೀಚಿನ ದಿನಗಳಲ್ಲಿ, ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳು ಸಾಕಷ್ಟು ಸಾಮಾನ್ಯವಾಗಿದೆ. ಚಿಕ್ಕ ವಯಸ್ಸಿನಲ್ಲೇ ಅನೇಕ ಮಂದಿ ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ ಈ ಮನೆ ಮದ್ದು.
ಕೂದಲಿನ ಸಮಸ್ಯೆ ತೊಡೆದುಹಾಕಲು ಈರುಳ್ಳಿ ರಾಮಬಾಣವಾಗಿ ಕೆಲಸ ಮಾಡುತ್ತದೆ. ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಇದು ಸಹಾಯ ಮಾಡುತ್ತದೆ.
2 ಚಮಚ ಈರುಳ್ಳಿ ರಸವನ್ನು ಎರಡು ಚಮಚ ನಿಂಬೆ ರಸದೊಂದಿಗೆ ಬೆರೆಸಿ ಮಿಶ್ರಣ ಮಾಡಿಕೊಳ್ಳಿ.
ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಅರ್ಧ ಗಂಟೆಯವರೆಗೆ ಹಾಗೆಯೇ ಬಿಡಿ. ನಂತರ ಕೂದಲಿಗೆ ಸ್ನಾನ ಮಾಡಿ.
.ಕೂದಲು ಕಪ್ಪಾಗಿಸಲು ನೆಲ್ಲಿಕಾಯಿ ಬೆಸ್ಟ್ ಔಷಧ. ಬಿಳಿ ಕೂದಲನ್ನು ಕಪ್ಪಾಗಿಸಲು ನೆಲ್ಲಿಕಾಯಿಯ ಹೇರ್ ಮಾಸ್ಕ್ ಬಳಸಿ.
2-3 ನೆಲ್ಲಿಕಾಯಿ ತೆಗೆದುಕೊಂಡು ಚೆನ್ನಾಗಿ ರುಬ್ಬಿಕೊಳ್ಳಿ. ಈ ಪೇಸ್ಟ್ ಗೆ ಒಂದು ಚಮಚ ಬಾದಾಮಿ ಎಣ್ಣೆ ಮತ್ತು ಜೇನು ತುಪ್ಪ ಸೇರಿಸಿ. ಈ ಮೂರು ವಸ್ತುಗಳನ್ನು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಅರ್ಧ ಗಂಟೆ ಹಾಗೆಯೇ ಬಿಡಿ. ಈ ಹೇರ್ ಮಾಸ್ಕ್ ಕೂದಲಿಗೆ ಕಂಡೀಶನರ್ ನಂತೆ ಕೆಲಸ ಮಾಡುತ್ತದೆ. ಅಲ್ಲದೆ ಬಿಳಿ ಕೂದಲನ್ನು ಕಪ್ಪಾಗಿಸುತ್ತದೆ.
ಹರಿವೆ ಸೊಪ್ಪಿನ ಎಲೆಗಳನ್ನು ತೆಗೆದುಕೊಂಡು ಚೆನಾಗಿ ರುಬ್ಬಿಕೊಂಡು ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ. ಒಂದೂವರೆ ಗಂಟೆ ಬಿಟ್ಟು ಕೂದಲು ತೊಳೆಯಿರಿ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.