ತೂಕ ನಿಯಂತ್ರಣ ಮಾತ್ರವಲ್ಲ ಜೇನುತುಪ್ಪದಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

Yashaswini V
Mar 28,2024

ಅಸಿಡಿಟಿ

ಪ್ರತಿ ದಿನ ಒಂದು ಚಮಚ ಜೇನುತುಪ್ಪ ಸೇವಿಸುವುದರಿಂದ ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪರಿಹಾರ ದೊರೆಯುತ್ತದೆ.

ತೂಕ ಇಳಿಕೆ

ಬೆಚ್ಚಗಿನ ನೀರಿನಲ್ಲಿ ನಿಂಬೆರಸದೊಂದಿಗೆ ಜೇನುತುಪ್ಪ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಲು ಸಹಕಾರಿ ಆಗಿದೆ.

ರೋಗ ನಿರೋಧಕ ಶಕ್ತಿ

ನಿತ್ಯ ಬೆಳಿಗ್ಗೆ ಒಂದು ಲೋಟ ನೀರಿನಲ್ಲಿ ಒಂದು ಚಮಚ ಜೇನು ತುಪ್ಪವನ್ನು ಬೆರೆಸಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಸೋಂಕಿನಿಂದ ರಕ್ಷಣೆ

ಜೇನು ತುಪ್ಪದಲ್ಲಿ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗುಣಗಳಿದ್ದು ಇದರ ಸೇವನೆಯು ನಮ್ಮನ್ನು ಸೋಂಕಿನಿಂದ ರಕ್ಷಿಸುತ್ತದೆ.

ಸುಂದರ ತ್ವಚೆ

ಸ್ವಲ್ಪವೇ ಸ್ವಲ್ಪ ಜೇನುತುಪ್ಪವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿದ್ನ ತ್ವಚೆಯ ಬಣ್ಣ ಸುಧಾರಿಸಿ ಸುಂದರ ತ್ವಚೆಯನ್ನು ಪಡೆಯಲು ತುಂಬಾ ಪ್ರಯೋಜನಕಾರಿ ಆಗಿದೆ.

ಹುಣ್ಣು

ಜೇನು ತುಪ್ಪವನ್ನು ನಾಲಿಗೆ ಮೇಲಿಟ್ಟು ಸ್ವಲ್ಪ ಸಮಯದ ಬಳಿಕ ಬಾಯಿಯಿಂದ ಲಾಲಾರಸವನ್ನು ತಯಾರಿಸಿ ಅದನ್ನು ನುಂಗುವುದರಿಂದ ಹುಣ್ಣಿನ ಸಮಸ್ಯೆಗೆ ಪರಿಹಾರ ದೊರೆಯುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

VIEW ALL

Read Next Story