ಬೆಲ್ಲ ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ಲಾಭದಾಯಕ
ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬೆಲ್ಲವನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ಬೆಲ್ಲ ಅತ್ಯುತ್ತಮ ಆಹಾರ ಪದಾರ್ಥವಾಗಿದೆ.
ಆಮ್ಲೀಯತೆ, ಅಜೀರ್ಣ ಮತ್ತು ವಾಯು ಸಮಸ್ಯೆಯಿದ್ದರೆ, ಬೆಲ್ಲವು ನಿಮಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
ಗಂಟಲು ನೋವಿನ ಸಮಸ್ಯೆ ಇರುವವರು ತುಳಸಿ ರಶದೊಂದಿಗೆ ಬೆಲ್ಲ ಮಿಶ್ರಣ ಮಾಡಿ ಸೇವಿಸುವುದರಿಂದ ಪರಿಹಾರ ಪಡೆಯಬಹುದು.
ಪಿರಿಯಡ್ಸ್ ಸಮಯದಲ್ಲಿ ನೋವು ಮತ್ತು ಹೊಟ್ಟೆ ಸೆಳೆತವನ್ನು ನಿವಾರಿಸಲು ಬೆಲ್ಲವು ತುಂಬಾ ಸಹಾಯಕವಾಗಿದೆ.
ಬೆಲ್ಲವು ಉತ್ತಮ ಪ್ರಮಾಣದ ಕಬ್ಬಿಣಾಂಶವನ್ನು ಹೊಂದಿದ್ದು ಇದರ ನಿಯಮಿತ ಸೇವನೆಯು ರಕ್ತಹೀನತೆ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ.
ನಿಯಮಿತ ಬೆಲ್ಲ ಸೇವನೆಯಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಬೆಲ್ಲವು ದೇಹವನ್ನು ನಿರ್ವಿಷಗೊಳಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.
ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.