ಈ ಕಾರಣಗಳಿಗಾಗಿ ಮಳೆಗಾಲದಲ್ಲಿ ನೇರಳೆ ಹಣ್ಣು ತಿನ್ನಲೇ ಬೇಕು

ನೇರಳೆ ಹಣ್ಣಿನ ಪ್ರಯೋಜನ

ಇಂಡಿಯನ್ ಬ್ಲಾಕ್ ಬೆರಿ ಎಂದು ಕರೆಯಲ್ಪಡುವ ನೇರಳೆ ಹಣ್ಣು ತಿನ್ನುವುದಕ್ಕೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನಕಾರಿಯಾಗಿದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ನೇರಳೆ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್, ವಿಟಮಿನ್ ಇ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಹೀಗಾಗಿ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ

ಮಳೆಗಾಲದಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಹಣ್ಣಿನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಮಧುಮೇಹ ನಿಯಂತ್ರಣ

ನೇರಳೆ ಹಣ್ಣಿನ ಗ್ಲೈಸೋಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ.ಇದು ಬ್ಲಡ್ ಶುಗರ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತ್ವಚೆಯ ಆರೋಗ್ಯ

ನೇರಳೆ ಹಣ್ಣಿನಲ್ಲಿರುವ ಖನಿಜ ಮತ್ತು ವಿಟಮಿನ್ ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ.

ಹೃದಯದ ಆರೋಗ್ಯ

ಹೃದಯದ ಆರೋಗ್ಯಕ್ಕೂ ಇದು ಬೆಸ್ಟ್. ಇದು ಬಿಪಿಯನ್ನು ನಾರ್ಮಲ್ ಆಗಿ ಇಡಲು ಸಹಾಯ ಮಾಡುತ್ತದೆ.

ರಕ್ತದ ಕೊರತೆ ನೀಗಿಸುತ್ತದೆ

ನೇರಳೆ ಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಐರನ್ ಅಡಗಿರುತ್ತದೆ. ಇದು ದೇಹದಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

VIEW ALL

Read Next Story