ತೂಕ ನಷ್ಟ ಸೇರಿದಂತೆ ಈ ಸಮಸ್ಯೆಗಳಿಗೆ ಅತ್ಯುತ್ತಮ ಮದ್ದು ಜೀರಿಗೆ ನೀರು

Yashaswini V
May 16,2024

ಜೀರಿಗೆ ನೀರು

ಜೀರಿಗೆಯಲ್ಲಿ ಹಲವು ಪೋಷಕಾಂಶಗಳು ಅಡಕವಾಗಿದ್ದು ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಅವುಗಳೆಂದರೆ...

ತೂಕ ಇಳಿಕೆ

ರುಚಿಕರ ಮತ್ತು ಪರಿಮಳಯುಕ್ತ ಜೀರಿಗೆ ನೀರಿನಲ್ಲಿ ಫೈಬರ್ ಸಮೃದ್ಧವಾಗಿದ್ದು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ಆರೋಗ್ಯಕರವಾಗಿ ತೂಕ ಇಳಿಸಬಹುದು.

ಅಜೀರ್ಣ ಸಮಸ್ಯೆ

ನಿತ್ಯ ಒಂದು ಲೋಟ ಜೀರಿಗೆ ನೀರು ಕುಡಿಯುವುದರಿಂದ ಅಜೀರ್ಣ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ರಕ್ತಹೀನತೆ ಸಮಸ್ಯೆ

ಜೀರಿಗೆ ಕಬ್ಬಿಣದ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ನಿತ್ಯ ಜೀರಿಗೆ ನೀರನ್ನು ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಬಹುದು.

ಹೃದಯದ ಆರೋಗ್ಯ

ಜೀರಿಗೆ ನೀರಿನಲ್ಲಿ ಪೊಟ್ಯಾಸಿಯಮ್ ಹೇರಳವಾಗಿ ಕಂಡು ಬರುತ್ತದೆ. ನಿತ್ಯ ಒಂದು ಗ್ಲಾಸ್ ಜೀರಿಗೆ ನೀರಿನ ಸೇವನೆಯು ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ.

ನಿದ್ರಾಹೀನತೆ ಸಮಸ್ಯೆ

ಪ್ರತಿದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಜೀರಿಗೆ ಕುಡಿಯುವುದರಿಂದ ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story