ತುಳಸಿ ಸಸ್ಯವನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಭಾರತದ ಪ್ರತಿಯೊಂದು ಮನೆಯಲ್ಲೂ ಈ ಗಿಡವನ್ನು ಪೂಜಿಸಲಾಗುತ್ತದೆ. ತುಳಸಿ ಒಂದು ಪ್ರಯೋಜನಕಾರಿ ಸಸ್ಯವಾಗಿದ್ದು, ಆಯುರ್ವೇದದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.
ತುಳಸಿ ಎಲೆಗಳು ಆಂಟಿ ಬ್ಯಾಕ್ಟೀರಿಯಲ್, ಆ್ಯಂಟಿ ವೈರಲ್, ಆ್ಯಂಟಿ ಫಂಗಲ್ ನಂತಹ ಗುಣಗಳನ್ನು ಹೊಂದಿವೆ. ಈ ಗುಣಲಕ್ಷಣಗಳು ದೇಹದ ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ತುಳಸಿ ಎಲೆಗಳು ಹೊಟ್ಟೆಗೆ ಅಮೃತವಿದ್ದಂತೆ. ಹೊಟ್ಟೆಯ ಕಿರಿಕಿರಿ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ. ಇದಲ್ಲದೆ ತುಳಸಿ ಎಲೆಗಳು ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುತ್ತವೆ.
ತುಳಸಿಯಲ್ಲಿ ಕಂಡುಬರುವ ಒಲಿಯಾನೊಲಿಕ್ ಆಮ್ಲವು ಆರೋಗ್ಯದ ದೃಷ್ಟಿಯಿಂದ ತುಂಬಾ ಪ್ರಯೋಜನಕಾರಿಯಾಗಿದೆ ಮತ್ತು ಅನೇಕ ರೋಗಗಳಿಂದ ಪರಿಹಾರವನ್ನು ನೀಡುತ್ತದೆ.
ತುಳಸಿಯು ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ವೈರಲ್ ಗುಣಗಳನ್ನು ಹೊಂದಿದ್ದು, ಶೀತ, ಕೆಮ್ಮು, ಬ್ರಾಂಕೈಟಿಸ್’ನಂತಹ ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.
ತುಳಸಿ ಉರಿಯೂತ ನಿವಾರಕ ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದ್ದು, ಎದೆಯುರಿ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.
ತುಳಸಿಯು ಅಧಿಕ ರಕ್ತದೊತ್ತಡವನ್ನು ನಿಗ್ರಹಿಸುವ ಗುಣಗಳನ್ನು ಹೊಂದಿದೆ. ಜೊತೆಗೆ ನಿದ್ರಾಜನಕ ಗುಣಗಳನ್ನು ಹೊಂದಿದ್ದು ಇದು ನಿದ್ರಾಹೀನತೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.
(ಸೂಚನೆ: ಆತ್ಮೀಯ ಓದುಗರೇ, ಈ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಈ ವೇಳೆ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ಇವುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ)