Weight loss: ಆಹಾರ ಕ್ರಮ ಮತ್ತು ವ್ಯಾಯಾಮದ ಜೊತೆಗೆ, ಪ್ರತಿದಿನ ಬೆಳಿಗ್ಗೆ ಒಂದು ಲೋಟ ನೀರು ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ.
ಆಹಾರ ಕ್ರಮ ಮತ್ತು ವ್ಯಾಯಾಮದ ಜೊತೆಗೆ, ಪ್ರತಿದಿನ ಬೆಳಿಗ್ಗೆ ಒಂದು ಲೋಟ ನೀರು ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ.
ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ.
ನಿಂಬೆಯಲ್ಲಿರುವ ವಿಟಮಿನ್ ಸಿ ಹಾರ್ಮೋನ್ ಮಟ್ಟವನ್ನು ನಿಯಂತ್ರಿಸುತ್ತದೆ. ಇದರಿಂದ ನೀವು ತೂಕ ಇಳಿಸಿಕೊಳ್ಳಬಹುದು.
ಈ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.
ವಿಶೇಷವಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಕೊಬ್ಬನ್ನು ಬೇಗನೆ ಸುಡಲು ಸಹಾಯವಾಗುತ್ತದೆ.
ಈ ನೀರು ಉತ್ಕರ್ಷಣ ನಿರೋಧಕಗಳಿಂದ ತುಂಬಿರುವುದರಿಂದ, ಇದು ನಿಮ್ಮ ದೇಹದಲ್ಲಿನ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ.
ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸವನ್ನು ಹಿಂಡಿ, ಬೇಕಾದರೆ ಸ್ವಲ್ಪ ಜೇನುತುಪ್ಪವನ್ನು ಸೇರಿಸಿ ಬೆಳಿಗ್ಗೆ ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.