ಹೃದಯವು ರಕ್ತವನ್ನು ಹೊರಹಾಕಿದಾಗ ರಕ್ತದ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಬೀರುವ ಒತ್ತಡವೇ ರಕ್ತದೊತ್ತಡ ಅಥವಾ ಬಿಪಿ.
ರಕ್ತದೊತ್ತಡವು ನಮ್ಮ ಶರೀರದಲ್ಲಿರುವ ರಕ್ತದ ಪರಿಮಾಣ ಮತ್ತಿತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ.
ಕೊರೊನಾ ಸಾಂಕ್ರಾಮಿಕ ಬಂದ ಮೇಲೆ ಹೆಚ್ಚು ಅಥವಾ ಕಡಿಮೆ ಬಿಪಿ (ರಕ್ತದ ಒತ್ತಡ) ಪ್ರಕರಣಗಳು ಹೆಚ್ಚಾಗಿವೆ.
ಆಫೀಸ್‌ನಲ್ಲಿನ ಒತ್ತಡ, ವೈಯಕ್ತಿಕ ಅಥವಾ ಕೌಟುಂಬಿಕ ಕಾರಣಗಳಿಂದ ಬಿಪಿ ಜಾಸ್ತಿ ಅಥವಾ ಕಡಿಮೆ ಆಗಬಹುದು.
ಸಾಮಾನ್ಯವಾಗಿ ಆರೋಗ್ಯವಂತ ಪುರುಷ ಹಾಗೂ ಮಹಿಳೆಯರಲ್ಲಿ ರಕ್ತದ ಒತ್ತಡವು 120/80 ಮಿಲಿಮೀಟರ್‌ಗಳಿಷ್ಟಿರುತ್ತದೆ. ಇದು ವ್ಯಕ್ತಿಯಿಂದ ವ್ಯಕ್ತಿಗೆ ಸ್ವಲ್ಪ ಬದಲಾಗುತ್ತಿರುತ್ತದೆ.
ರಕ್ತದ ಒತ್ತಡವು 90/60 ಗಿಂತಲೂ ಕಡಿಮೆಯಾದಾಗ ಅದನ್ನು ಕಡಿಮೆ ರಕ್ತದ ಒತ್ತಡ ಅಥವಾ ಲೋ ಬಿಪಿ ಎನ್ನುತ್ತೇವೆ.
ಅಧಿಕ ರಕ್ತದೊತ್ತಡ ಹೇಗೆ ದೇಹದ ಪ್ರಮುಖ ಅಂಗಗಳ ಮೇಲೆ ದುಷ್ಪರಿಣಾಮ ಬೀರಬಹುದೋ, ಅದೇ ರೀತಿ ಕಡಿಮೆ ರಕ್ತದೊತ್ತಡವೂ ಅಪಾಯಕಾರಿ.
ಲೋ ಬಿಪಿ ಶರೀರದ ಪ್ರಮುಖ ಅಂಗಾಂಗಗಳಾದ ಹೃದಯ, ಮೆದುಳು ಹಾಗೂ ಮೂತ್ರಪಿಂಡಗಳ ರಕ್ತ ಪರಿಚಲನೆಯಲ್ಲಿ ತೊಡಕನ್ನು ಉಂಟುಮಾಡುತ್ತದೆ.
ಜೀವನಶೈಲಿಯಲ್ಲಿನ ಬದಲಾವಣೆ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.