ನಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಜೀವನ ಶೈಲಿಯಲ್ಲಿ ಕೆಲವು ಬದಲಾವಣೆಗಳ ಅಗತ್ಯವಿರುತ್ತದೆ.
ದಿನನಿತ್ಯ ನಿಯಮಿತ ವ್ಯಾಯಾಮ ಮಾಡುವುದರಿಂದ ನಮ್ಮ ಮಾನಸಿಕ ಆರೋಗ್ಯ ಚೆನ್ನಾಗಿರುತ್ತದೆ.
ವಿಶ್ರಾಂತಿ ಮತ್ತು ನಿದ್ರೆಗೆ ಒತ್ತು ನೀಡುವುದರಿಂದ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.
ಧ್ಯಾನ ಮತ್ತು ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಮಾನಸಿಕ ಸ್ಥಿತಿಗತಿ ಚೆನ್ನಾಗಿರುತ್ತದೆ.
ಸ್ವ-ಆರೈಕೆಯ ಅಭ್ಯಾಸ ಮತ್ತು ಧ್ಯಾನದಂತಹ ಚಟುವಟಿಕೆಗಳಿಂದ ಒತ್ತಡವನ್ನು ನಿಯಂತ್ರಿಸಬಹುದು.
ಬಂಧು-ಬಳಗದವರ ಜೊತೆ ಸಂಪರ್ಕದಲ್ಲಿರುವುದರಿಂದಲೂ ಮಾನಸಿಕ ಆರೋಗ್ಯ ಚೆನ್ನಾಗಿರುತ್ತದೆ.
ಜೀವನದ ಬಗ್ಗೆ ಯಾವಾಗಲೂ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿರುವುದು.
ಜೀವನದಲ್ಲಿ ಬರುವ ಕಷ್ಟಗಳನ್ನು ಸ್ಥಿರ ಮನಸ್ಸಿನಿಂದ ಎದುರಿಸುವ ಆತ್ಮವಿಶ್ವಾಸ ಮತ್ತು ಧೈರ್ಯ ಹೊಂದುವುದು.