ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಕೆಲವೊಂದು ಹಣ್ಣುಗಳನ್ನು ಸೇವಿಸುವುದು ಬಹಳ ಮುಖ್ಯ.
ದೇಹದ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡಿಕೊಳ್ಳಲು ಪಪ್ಪಾಯ ಹಣ್ಣನ್ನು ಸೇವಿಸಬೇಕು.
ನಿತ್ಯ ಒಂದು ಕಪ್ ದ್ರಾಕ್ಷಿ ತಿಂದರೆ ತೂಕ ಇಳಿಸುವುದು ಸುಲಭವಾಗುತ್ತದೆ.
ಬೇಸಿಗೆಯಲ್ಲಿ ನಿತ್ಯ ಎಳನೀರು ಕುಡಿಯುವುದರಿಂದ ದೇಹದಲ್ಲಿ ನೀರಿನ ಅಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಎಷ್ಟು ನೀರು ಕುಡಿದರೂ ಕಡಿಮೆಯೇ. ಹೀಗಿರುವಾಗ ಬೆಸಿಗೆಯಲ್ಲಿ ಹೆಚ್ಚು ನೀರು ಕುಡಿಯಬೇಕು.
ಹಸಿರು ಸೊಪ್ಪು- ತರಕಾರಿಗಳಲ್ಲಿ ಪೋಷಕಾಂಶಗಳು ಹೇರಳವಾಗಿ ಕಂಡುಬರುತ್ತವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ರೋಗಗಳಿಂದ ಪರಿಹಾರ ಸಿಗುತ್ತದೆ.
ವಿಟಮಿನ್ ಎ, ಸಿ, ಕೆ, ಪೊಟ್ಯಾಸಿಯಮ್, ಲುಟೀನ್, ಫೈಬರ್ ಮುಂತಾದ ಅನೇಕ ಪೋಷಕಾಂಶಗಳು ಸೌತೆಕಾಯಿಯಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ನಿಯಮಿತವಾಗಿ ಸೌತೆಕಾಯಿ ಸೇವಿಸುವುದರಿಂದ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಬಹುದು.
ಬೇಸಿಗೆಯಲ್ಲಿ ಅತಿ ದೊಡ್ಡ ಸಮಸ್ಯೆ ಎಂದರೆ ಡಿಹೈಡ್ರೇಷನ್. ಇದನ್ನು ತಪ್ಪಿಸಲು, ಸಾಕಷ್ಟು ನೀರು ಕುಡಿಯುವುದರ ಜೊತೆಗೆ, ಪ್ರತಿದಿನ ಕಲ್ಲಂಗಡಿ ಸೇವಿಸಿ.