ನಿತ್ಯ ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ದುರ್ವಾಸನೆ ಉಂಟುಮಾಡುವ ಬ್ಯಾಕ್ಟೀರಿಯಾ ಮತ್ತು ಆಹಾರದ ಕಣಗಳನ್ನು ಹೊರಹಾಕಲು ಸಹಾಯಕವಾಗುತ್ತದೆ.
ಸಕ್ಕರೆ ಮುಕ್ತ ಚ್ವಿಂಗಮ್ ಸೇವನೆಯಿಂದ ಲಾಲಾರಸದ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಬಾಯಿಯ ದುರ್ವಾಸನೆಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.
ದಿನಕ್ಕೆ ಕನಿಷ್ಠ ಎರಡು ಬಾರಿಯಾದರೂ ಬ್ರಷ್ ಮಾಡಿ. ಅದರಲ್ಲೂ ಬೆಳಿಗ್ಗೆ ಎದ್ದ ತಕ್ಷಣ ರಾತ್ರಿ ಊಟದ ನಂತರ ಬ್ರಷ್ ಮಾಡುವುದರಿಂದ ಬಾಯಿಯ ದುರ್ವಾಸನೆಯನ್ನು ತಡೆಯಬಹುದು.
ಗ್ರೀನ್ ಟೀ ಸೇವನೆಯು ಬಾಯಿಯಲ್ಲಿ ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ತಟಸ್ಥಗೊಳಿಸುವ ಮೂಲಕ ನಿಮ್ಮ ಉಸಿರಾಟವನ್ನು ತಾಜಾಗೊಳಿಸಲು ಸಹಾಯಕವಾಗಿದೆ.
ಮೊಸರು ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. ಇದರಿಂದ ಬಾಯಿಯಲ್ಲಿ ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾದ ಪ್ರಮಾಣ ಕಡಿಮೆ ಆಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.