Okra Health benefits: ಬೆಂಡೆಕಾಯಿ ಹಲವು ರೋಗಗಳಿಗೆ ಔಷಧವಾಗಿ ಕೆಲಸ ಮಾಡುತ್ತದೆ.
ಬೆಂಡೆಕಾಯಿ.. ರುಚಿ ಚೆನ್ನಾಗಿದ್ದರೂ, ಕೆಲವರು ಅಂಟಂಟಾಗಿರುವುದರಿಂದ ಇದನ್ನು ತಿನ್ನಲು ಇಷ್ಟಪಡುವುದಿಲ್ಲ.
ಬೆಂಡೆಕಾಯಿಯಲ್ಲಿ ಆರೋಗ್ಯಕ್ಕೆ ಬೇಕಾದ ಹಲವಾರು ಫೋಷಕಾಂಶಗಳು ಸಮೃದ್ದವಾಗಿದೆ.
ಬೆಂಡೆಕಾಯಿಯು ಪೊಟ್ಯಾಸಿಯಮ್, ಕಬ್ಬಿಣ, ಕ್ಯಾಲ್ಸಿಯಂ, ಸತು, ಸೋಡಿಯಂ ಮತ್ತು ಮೆಗ್ನೀಸಿಯಮ್‌ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
ಬೆಂಡೆಕಾಯಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ತಜ್ಞರ ಪ್ರಕಾರ ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದರಲ್ಲಿ ಪಾಲಿಫಿನಾಲ್ಸ್ ಎಂಬ ಉತ್ಕರ್ಷಣ ನಿರೋಧಕವಿದೆ.ಇದು ಅಧಿಕ ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೆಂಡೆಕಾಯಿ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ.
ಬೆಂಡೆಕಾಯಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಅಂಶಗಳನ್ನು ಒಳಗೊಂಡಿದೆ.
ಬೆಂಡೆಕಾಯಿಯಲ್ಲಿ ಫೋಲೇಟ್ ಇರುತ್ತದೆ. ಇದು ಮಗುವಿನಲ್ಲಿ ನರ ಕೊಳವೆಯ ದೋಷಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಬೆಂಡೆಕಾಯಿಯಲ್ಲಿ ವಿಟಮಿನ್ ಎ, ಸಿ, ಬೀಟಾ-ಕ್ಯಾರೋಟಿನ್ ಮತ್ತು ಲುಟೀನ್ ಇರುತ್ತವೆ.
ಬೆಂಡೆಕಾಯಿಯಲ್ಲಿ ನಾರು ಮತ್ತು ಲೋಳೆಯು ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.