ನೇರಳೆ ಹಣ್ಣು ಸೇವನೆಯಿಂದ ಮಧುಮೇಹ ಮಾತ್ರವಲ್ಲ ಈ ಗಂಭೀರ ಕಾಯಿಲೆಯೂ ಗುಣವಾಗುತ್ತೆ!
ನೇರಳೆ ಹಣ್ಣು ರುಚಿಯ ಜೊತೆಗೆ ಆರೋಗ್ಯಕ್ಕೆ ಸಾಕಷ್ಟು ಉಪಯುಕ್ತವಾದ ಹಣ್ಣು. ಇದು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ಫೈಬರ್, ರಂಜಕದಂತಹ ಪೋಷಕಾಂಶಗಳಿವೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ನೇರಳೆ ಹಣ್ಣಿನಲ್ಲಿ ಜಂಬೋಲಾನ ಎಂಬ ಅಂಶ ಕಂಡುಬರುತ್ತದೆ.ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಅಧಿಕ ರಕ್ತದೊತ್ತಡ ರೋಗಿಗಳಿಗೆ ನೇರಳೆ ಹಣ್ಣು ತುಂಬಾ ಪ್ರಯೋಜನಕಾರಿ. ಬಿಪಿ ಬರುವ ಅಪಾಯವನ್ನು ಕಡಿಮೆ ಮಾಡಬಹುದು.
ನೇರಳೆ ಹಣ್ಣು ಫೈಬರ್‌ನಲ್ಲಿ ಸಮೃದ್ಧವಾಗಿದೆ. ಕಡಿಮೆ ಕ್ಯಾಲೋರಿ ಹೊಂದಿದೆ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನೇರಳೆ ಹಣ್ಣು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜಾಮೂನ್ ಜೀವಸತ್ವಗಳ ಶಕ್ತಿ ಕೇಂದ್ರವಾಗಿದೆ.
ವಿಟಮಿನ್-ಎ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುತ್ತದೆ. ಕಣ್ಣಿನ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.
ನೇರಳೆ ಹಣ್ಣು ಕಬ್ಬಿಣದಿಂದ ಸಮೃದ್ಧವಾಗಿದೆ. ಹಿಮೋಗ್ಲೋಬಿನ್ ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತವನ್ನು ಶುದ್ಧವಾಗಿರಿಸುತ್ತದೆ.
ನೇರಳೆ ಹಣ್ಣು ಸೇವನೆಯಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆ ಆಗುತ್ತದೆ. ನೇರಳೆ ಹಣ್ಣು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವ ಶಕ್ತಿ ಹೊಂದಿದೆ.