ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯಲಾಗುತ್ತದೆ. ಇದು ಆರೋಗ್ಯ ಸಂಜೀವಿನಿ.
ಇದರಲ್ಲಿ ವಿಟಮಿನ್ ಸಿ, ಕ್ಯಾಲ್ಷಿಯಂ, ಮೆಗ್ನೆಶಿಯಂ, ಸತು ರಂಜಕದಂಥಹ ಪೋಷಕಾಂಶಗಳಿವೆ.
ಇದರಲ್ಲಿ ಫೈಬರ್ ಹೇರಳವಾಗಿದ್ದು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸುತ್ತದೆ.
ಇದರಲ್ಲಿರುವ ಕ್ಯಾಲ್ಷಿಯಂ ಮೂಳೆಗಳ ಆರೋಗ್ಯವನ್ನು ವೃದ್ದಿಸುತ್ತದೆ.
ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇರುತ್ತದೆ.
ಇದರಲ್ಲಿ ವಿಟಮಿನ್ ಸಿ ಸಮೃದ್ದವಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದರಲ್ಲಿರುವ ಕಬ್ಬಿಣದ ಅಂಶ ದೇಹದಲ್ಲಿ ರಕ್ತದ ಮಟ್ಟವನ್ನು ಹೆಚ್ಚಿಸುತ್ತದೆ.
ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ.