ಸೋಡಿಯಂ, ಪೊಟ್ಯಾಸಿಯಮ್, ಫೈಬರ್, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಸಿ ಯಂತಹ ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪೇರಲ/ಸೀಬೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಆದಾಗ್ಯೂ, ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಪೇರಲ ಸೇವನೆಯು ಅಡ್ಡಪರಿಣಾಮವನ್ನು ಉಂಟು ಮಾಡಬಹುದು. ಯಾವ್ಯಾವ ಆರೋಗ್ಯ ಸಮಸ್ಯೆ ಇದ್ರೆ ಸೀಬೆಹಣ್ಣನ್ನು ತಿನ್ನಬಾರದು....
ಪೇರಲದಲ್ಲಿ ಫೈಬರ್ ಹೆಚ್ಚಾಗಿದ್ದು ಜೀರ್ಣಾಂಗ ವ್ಯವಸ್ಥೆಯನ್ನು ವೇಗಗೊಳಿಸುತ್ತದೆ. ಹಾಗಾಗಿ, ಈ ಸಂದರ್ಭದಲ್ಲಿ ಪೇರಲ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ.
ಪೇರಲ ಸೇವಿಸುವಾಗ ಹಲ್ಲುಗಳ ಮೇಲೆ ಒತ್ತಡ ಹೆಚ್ಚಾಗಬಹುದು. ಜೊತೆಗೆ ಪೇರಲ ಬೀಜಗಳು ಹಲ್ಲಿನ ಸಂದಿಯಲ್ಲಿ ಸಿಲುಕುವ ಸಾಧ್ಯತೆ ಇರುವುದರಿಂದ ಈ ವೇಳೆ ಪೇರಲ ತಿನ್ನಬೇಡಿ.
ಸೀಬೆಹಣ್ಣಿನಲ್ಲಿ ವಿಟಮಿನ್ ಸಿ, ಫ್ರಕ್ಟೋಸ್ ಅಧಿಕವಾಗಿರುವುದರಿಂದ ವಾತದ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇರುತ್ತದೆ.
ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾದವರು ಸೀಬೆಹಣ್ಣನ್ನು ತಿನ್ನಬಾರದು. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ ರಕ್ತಸ್ರಾವಕ್ಕೂ ಕಾರಣವಾಗಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.