ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯವನ್ನು ಬಲಪಡಿಸುತ್ತವೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತವೆ.
ಇದನ್ನು ಪ್ರತಿದಿನ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ವೈರಲ್ ಮತ್ತು ಬ್ಯಾಕ್ಟಿರಿಯಾದ ಸೋಂಕುಗಳನ್ನು ದೂರವಿಡುತ್ತದೆ.
ವಿಟಮಿನ್ ಸಿ ಹೇರಳವಾಗಿರುವುದರಿಂದ ಚರ್ಮವು ಕಾಂತಿಯುತವಾಗುತ್ತದೆ. ಮೊಡವೆಗಳು ಕಡಿಮೆಯಾಗುತ್ತವೆ.
ಹೆಚ್ಚಿನ ನಾರಿನ ಅಂಶದಿಂದಾಗಿ, ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳು ಕಡಿಮೆಯಾಗುತ್ತವೆ.
ದಾಳಿಂಬೆ ರಕ್ತದೊತ್ತಡವನ್ನು ಸಮತೋಲನಗೊಳಿಸುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.
ದಾಳಿಂಬೆ ರಸದಲ್ಲಿರುವ ಪೋಷಕಾಂಶಗಳು ಮೆದುಳಿನ ಚಟುವಟಿಕೆಯನ್ನು ಹೆಚ್ಚಿಸುತ್ತವೆ.
ಪ್ರತಿದಿನ ದಾಳಿಂಬೆ ತಿನ್ನುವ ಅಭ್ಯಾಸವನ್ನು ಬೆಳೆಸಿಕೊಳ್ಳುವುದರಿಂದ ದೇಹಕ್ಕೆ ಅದ್ಭುತವಾದ ಆರೋಗ್ಯ ಪ್ರಯೋಜನಗಳು ದೊರೆಯುತ್ತವೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ. ಇದನ್ನೂ ಜೀ ಕನ್ನಡ ನ್ಯೂಸ್ ಖಚಿತ ಪಡಿಸುವುದಿಲ್ಲ)