ಹಸಿ ಬಾಳೆಹಣ್ಣು/ಬಾಳೆಕಾಯಿ ವಿಟಮಿನ್ ಬಿ 6, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದ್ದು, ಇದರ ಬಳಕೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. ಅವುಗಳೆಂದರೆ...
ಬಾಳೆಕಾಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ಇದು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ.
ಬಾಳೆಕಾಯಿಯಲ್ಲಿ ವಿಶೇಷ ಪ್ರೋಬಯಾಟಿಕ್ ಇದ್ದು ಇದು ಮೂಳೆಗಳಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆ.
ಬಾಳೆಕಾಯಿಯು ಮೆಗ್ನೀಸಿಯಮ್ ನಲ್ಲಿ ಸಮೃದ್ಧವಾಗಿದ್ದು ಇದು ಚಯಾಪಚಯವನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.
ಬಾಳೆಕಾಯಿ ಬಳಕೆಯೂ ಹೊಟ್ಟೆಯುರಿ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ.
ಬಾಳೆಕಾಯಿ ವಿಟಮಿನ್‌ಗಳು ಮತ್ತು ಪ್ರೋಟೀನ್‌ಗಳ ಖಜಾನೆಯಾಗಿದ್ದು ಇದರ ಬಳಕೆಯು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.