ತಜ್ಞರ ಪ್ರಕಾರ ಚಹಾ ಮತ್ತು ಕಾಫಿಯ ಪಿ.ಹೆಚ್ ಮೌಲ್ಯವು ಆಮ್ಲೀಯತೆಯ ಅಪಾಯವನ್ನು ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸಿದರೆ ಅದು ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆಯನ್ನು ಉಂಟುಮಾಡಬಹುದು.
ಖಾಲಿ ಹೊಟ್ಟೆಯಲ್ಲಿ ಚಹಾ/ಕಾಫಿ ಸೇವನೆಯಿಂದ ಚಯಾಪಚಯ ಕ್ರಿಯೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ.
ಈ ನಿರ್ಜಲೀಕರಣವು ಸ್ನಾಯು ಸೆಳೆತ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ಉಂಟುಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಹಸಿವು ಕಡಿಮೆಯಾಗಲಿದ್ದು, ಅಸಿಡಿಟಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
ಖಾಲಿ ಹೊಟ್ಟೆಯಲ್ಲಿ ಚಹಾ/ಕಾಫಿ ಸೇವನೆಯು ಅಜೀರ್ಣ, ಗ್ಯಾಸ್ ಮತ್ತು ಹೊಟ್ಟೆಯಲ್ಲಿ ಭಾರವಾದಂತಹ ಭಾವನೆ ಸಮಸ್ಯೆಗಳನ್ನು ಉಂಟುಮಾಡುತ್ತದೆ.