ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು, ಜನರು ಅನೇಕ ರೀತಿಯ ಆರೋಗ್ಯಕರ ಆಹಾರವನ್ನು ಸೇವಿಸುತ್ತಾರೆ.
ಬಾದಾಮಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಅನೇಕ ಪೋಷಕಾಂಶಗಳು ಇರುತ್ತವೆ. ನೀವು ಬಾದಾಮಿಯನ್ನು ಒಣಗಿಸಿ, ನೆನೆಸಿ ಅಥವಾ ಅದನ್ನು ಪುಡಿ ಮಾಡಿಯೂ ಸೇವಿಸಬಹುದು.
ನೆನೆಸಿದ ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ದುಪ್ಪಟ್ಟು ಲಾಭವಿದೆ. ಆ ಪ್ರಯೋಜನಗಳು ಏನೆಂಬುದನ್ನು ತಿಳಿಯೋಣ.
ಪ್ರತಿದಿನ ನೆನೆಸಿದ ಬಾದಾಮಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಇದು ಹೊಟ್ಟೆಗೆ ಪ್ರಯೋಜನಕಾರಿಯಾಗಿದೆ. ಗ್ಯಾಸ್, ಹೊಟ್ಟೆ ಉಬ್ಬುವುದು, ಅಜೀರ್ಣದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಬಾದಾಮಿಯಲ್ಲಿ ಫೈಬರ್, ಪ್ರೊಟೀನ್, ವಿಟಮಿನ್ ಇ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.
ಬಾದಾಮಿ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಹೃದಯದ ಆರೋಗ್ಯ ಕಾಪಾಡುತ್ತದೆ.
ಬಾದಾಮಿಯಲ್ಲಿ ವಿಟಮಿನ್ ಇ ಹೇರಳವಾಗಿದೆ. ಇದಲ್ಲದೇ ಬಾದಾಮಿಯಲ್ಲಿ ಅನೇಕ ಉರಿಯೂತ ನಿವಾರಕ ಗುಣಗಳಿವೆ. ಹೀಗಾಗಿ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.
ನೆನೆಸಿದ ಬಾದಾಮಿಯನ್ನು ಪ್ರತಿದಿನ ತಿನ್ನುವುದರಿಂದ ಅನೇಕ ಚರ್ಮ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ. ಜೊತೆಗೆ ಮುಖದ ಕಾಂತಿ ಹೆಚ್ಚುತ್ತದೆ.
ಬಾದಾಮಿ ತಿನ್ನುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ. ಇದರಲ್ಲಿ ಅನೇಕ ಜೀವಸತ್ವಗಳು ಮತ್ತು ಪೋಷಕಾಂಶಗಳು ಇದ್ದು, ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.