ಚಹಾ ಪುಡಿ ಕೂದಲನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಅದನ್ನು ಹೇಗೆ ಬಳಸುವುದು ಎನ್ನುವ ಮಾಹಿತಿ ಇಲ್ಲಿದೆ.
. ಮೂರು ಚಮಚ ಚಹಾ ಪುಡಿ ತೆಗೆದುಕೊಂಡು ನೀರಿನಲ್ಲಿ ಚೆನ್ನಾಗಿ ಕುದಿಸಿ. ನಂತರ ಇದನ್ನು ಅಕ್ಕಿ ನೀರಿನೊಂದಿಗೆ ಬೆರೆಸಿ.
ಚಹಾ ಮತ್ತು ಅಕ್ಕಿ ನೀರನ್ನು ಚೆನ್ನಾಗಿ ಮಿಶ್ರಣ ಮಾಡಿ. ಕೂದಲಿಗೆ ಶಾಂಪೂ ಮಾಡಿದ ನಂತರ ಕಂಡಿಷನರ್ ರೀತಿಯಲ್ಲಿ ಇದನ್ನು ಬಳಸಿ.
ಚಹಾಗೆ ಮೊಟ್ಟೆಯನ್ನು ಬೆರೆಸಿ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿದರೆ ಕೂದಲಿಗೆ ನೈಸರ್ಗಿಕ ಕಂಡೀಶನರ್ ಸಿಗುತ್ತದೆ.
ಕೇವಲ ಚಹಾ ಪುಡಿಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಆ ನೀರನ್ನು ಕೂದಲಿಗೆ ಹಚ್ಚಿ. ಸುಮಾರು ಅರ್ಧ ಗಂಟೆಯ ನಂತರ ಕೂದಲನ್ನು ತೊಳೆಯಿರಿ.
ಆಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ ಮತ್ತು ನಂಜು ನಿರೋಧಕ ಗುಣಗಳು ಚಹಾ ಪುಡಿಯಲ್ಲಿ ಕಂಡು ಬರುತ್ತವೆ. ಇದರಿಂದಾಗಿ ಕೂದಲು ಉದುರುವಿಕೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ಚಹಾ ಎಲೆಯ ನೀರನ್ನು ಕೂದಲಿಗೆ ಬಳಸುವುದರಿಂದ ಕೂದಲಿಗೆ ಹೊಳಪು ಬರುತ್ತದೆ.
ಕೂದಲ ಬೆಳವಣಿಗೆಗೆ ಇದು ಸಹಕಾರಿ. ತಲೆ ಹೊಟ್ಟಿನ ಸಮಸ್ಯೆಯನ್ನು ಕೂಡಾ ಇದು ನಿವಾರಿಸುತ್ತದೆ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಯಾವುದೇ ವೈದ್ಯಕೀಯ ಸಲಹೆಗೆ ಪರ್ಯಾಯವಾಗಿಲ್ಲ. ಇದನ್ನು ಶಿಕ್ಷಣದ ಉದ್ದೇಶಕ್ಕಾಗಿ ಮಾತ್ರ ನೀಡಲಾಗುತ್ತಿದೆ. ಇದನ್ನೂ ಅಳವಡಿಸುವ ಮುನ್ನ ವೈದ್ಯರ ಸಲಹೆ ಪಡೆದುಕೊಳ್ಳಿ. zee kannada news ಇದನ್ನು ಅನುಮೋದಿಸುವುದಿಲ್ಲ .)