ಬೇಸಿಗೆಯಲ್ಲಿ ಈ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಲು ಕುಡಿಯಲೇ ಬೇಕು ಎಳನೀರು
ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿರುವ ಎಳನೀರು ಸೇವನೆಯು ಬೇಸಿಗೆಯಲ್ಲಿ ಜಲಸಂಚಯನ ಸಮಸ್ಯೆಗೆ ಅತ್ಯುತ್ತಮ ಪರಿಹಾರವಾಗಿದೆ.
ಬೇಸಿಗೆಯಲ್ಲಿ ಪ್ರತಿದಿನ ಒಂದು ಗ್ಲಾಸ್ ಎಳನೀರು ಕುಡಿಯುವುದರಿದ್ನ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ.
ಎಳನೀರು ಸೇವನೆಯು ಚರ್ಮದ ಆರೋಗ್ಯವನ್ನು ಬೆಂಬಲಿಸುತ್ತದೆ.
ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿರುವ ಎಳನೀರು ಸೇವನೆಯು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ.
ಎಳನೀರು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಎಳನೀರಿನಲ್ಲಿ ಕ್ಯಾಲ್ಸಿಯಂ ಕಂಡು ಬರುತ್ತದೆ. ನಿತ್ಯ ಒಂದು ಗ್ಲಾಸ್ ಎಳನೀರು ಕುಡಿಯುವುದರಿಂದ ಮೂಳೆಗಳನ್ನು ಬಲಪಡಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.