ಚಳಿಗಾಲದಲ್ಲಿ ಅರಿಶಿನ ಬಳಕೆಯಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಪ್ರಯೋಜನ
ಪ್ರತಿ ಭಾರತೀಯ ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಅರಿಶಿನ ಆಹಾರದ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
ಚಳಿಗಾಲದಲ್ಲಿ ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಅವುಗಳೆಂದರೆ...
ಅರಿಶಿನದಲ್ಲಿ ಲಿಪೊಪೊಲಿಸ್ಯಾಕರೈಡ್ ಎಂಬ ಅಂಶವಿದ್ದು, ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಹಸಿ ಅರಿಶಿನದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣವಿದ್ದು, ಇದು ವಿಶೇಷವಾಗಿ ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ನ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುವಲ್ಲಿ ಪ್ರಯೋಜನಕಾರಿಯಾಗಿದೆ.
ಅರಿಶಿನದಲ್ಲಿ ಉರಿಯೂತವನ್ನು ತಡೆಗಟ್ಟುವ ವಿಶೇಷ ಗುಣವಿದೆ. ಇದರಿಂದಾಗಿ ಸಂಧಿವಾತ ರೋಗಿಗಳು ಸುಲಭ ಪರಿಹಾರವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ.
ಹಸಿ ಅರಿಶಿನವು ಇನ್ಸುಲಿನ್ ಮಟ್ಟವನ್ನು ಸಮತೋಲನಗೊಳಿಸುವ ಗುಣವನ್ನು ಹೊಂದಿದೆ. ಹೀಗಾಗಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಅರಿಶಿನವನ್ನು ನಿರಂತರವಾಗಿ ಬಳಸುವುದರಿಂದ, ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.